ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಅರ್ಜಿ ಅಹ್ವಾನ

CHITRADURGA NEWS | 27 MAY 2025

ಚಿತ್ರದುರ್ಗ: 2025-26ನೇ ಸಾಲಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

Also Read: ಬಿ.ಎಲ್.ವೇಣು @80 | ಅಭಿಮಾನಿಗಳಿಂದ ಜನ್ಮ ದಿನಾಚರಣೆ | ಏನು ಹೇಳಿದ್ರು ನೋಡಿ..

ವಿದ್ಯಾರ್ಥಿ ನಿಲಯಗಳಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಸಮವಸ್ತ್ರ ಲೇಖನಾ ಸಾಮಗ್ರಿ ಹಾಗೂ ಇತರ ಮೂಲಭೂತ ಸೌಲಭ್ಯ ಮತ್ತು ಉತ್ತಮವಾದ ಶೈಕ್ಷಣಿಕ ಮಾರ್ಗದರ್ಶನ ನೀಡಲಾಗುವುದು.

ಈ ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ಮೀಸಲಾತಿ ನಿಯಮಾನುಸಾರ ಸ್ಥಾನಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಗುಂಪುಗಳಿಗೆ ನೀಡಲಾಗುವುದು.

ಈ ಸಂಬಂಧ 05 ರಿಂದ 10 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ವೆಬ್ ಸೈಟ್ http://www.sw.kar.nic.in.com/ ನಲ್ಲಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಅರ್ಹ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಆಯ್ಕೆಯನ್ನು ಕೌನ್ಸಿಲಿಂಗ್ ಮೂಲಕ ನಡೆಸಲಾಗುವುದು.

Also Read: ಹಣ್ಣು, ತರಕಾರಿ ಮಾರಾಟ ಮಾಡಲು ಮಳಿಗೆ ಲಭ್ಯ

ಹೆಚ್ಚಿನ ಮಾಹಿತಿಗಾಗಿ ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-2) ರವರ ಕಚೇರಿಯನ್ನು ಸಂಪರ್ಕಿಸಬಹುದು ಪ್ರಕಟಣೆ ತಿಳಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version