ಮುಖ್ಯ ಸುದ್ದಿ
ಜಿಟಿಟಿಸಿ ತರಬೇತಿಗೆ ಅರ್ಜಿ ಆಹ್ವಾನ
CHITRADURGA NEWS | 20 MAY 2024
ಚಿತ್ರದುರ್ಗ: ನಗರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನ ಜಿಟಿಟಿಸಿ ಪ್ರವೇಶಾತಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಮೇ 13ರಿಂದ ಪ್ರಾರಂಭವಾಗಿದ್ದು, ಮೇ.27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಇದನ್ನೂ ಓದಿ: ಒಂದೇ ವಾರದಲ್ಲಿ 1399 ರೂ. ಇಳಿಕೆ ಕಂಡ ರಾಶಿ ಅಡಿಕೆ ಧಾರಣೆ
ಜಿಟಿಟಿಸಿ ಕೋರ್ಸ್ ಮಾಹಿತಿ: ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ DTDM ಹಾಗೂ ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್ DMCH ಮತ್ತು ಡಿಪ್ಲೊಮಾ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ DEC ಕೋರ್ಸುಗಳ ಪ್ರವೇಶ ಪಡೆಯಲು ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವೆಬ್ಸೈಟ್ ಮಾಹಿತಿ: ಅರ್ಜಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೆಬ್‍ಸೈಟ್‍ನಲ್ಲಿ cetonline.karnataka.gov.in/kea ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಜಿಲ್ಲಾಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸರ್ವೇ ಸಂಖ್ಯೆ 44, ಹಳೆಯ ಬೆಂಗಳೂರು ರಸ್ತೆ, ಕಣಿವೆ ಮಾರಮ್ಮ ದೇವಸ್ಥಾನದ ಹಿಂಭಾಗ, ಕುಂಚಿಗನಹಾಳ್ ಚಿತ್ರದುರ್ಗ, ದೂರವಾಣಿ ಸಂಖ್ಯೆ: 9738465834, 9481866855 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ರಾಂಶುಪಾಲರು ತಿಳಿಸಿದ್ದಾರೆ.