CHITRADURGA NEWS | 03 OCTOBER 2024
ಚಿತ್ರದುರ್ಗ: 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯ(Hostel)ಗಳಲ್ಲಿ ವೃತ್ತಿಪರ ಪದವಿ ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಹೊಸದಾಗಿ ಪ್ರವೇಶಾತಿ ಕಲ್ಪಿಸಲು ಆನ್ಲೈನ್ ಮೂಲಕ ಅರ್ಜಿ(Application) ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: Jayadeva Sports; ಜಯದೇವ ಕ್ರೀಡಾಜಾತ್ರೆಗೆ ಅ.5 ರಂದು ಚಾಲನೆ | ಡಾ.ಬಸವಕುಮಾರ ಸ್ವಾಮೀಜಿ

ಅ.2 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅ.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು https://shp.karnataka.gov.in/
ಅರ್ಜಿ ಸಲ್ಲಿಸಲು ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವರ್ಗಗಳಿಗೆ ವಾರ್ಷಿಕ ಆದಾಯ 2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ವರ್ಗಗಳ ವಾರ್ಷಿಕ ಆದಾಯ ರೂ.1ಲಕ್ಷ ಹೊಂದಿರಬೇಕು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in/ ನೋಡಬಹುದು.
ಕ್ಲಿಕ್ ಮಾಡಿ ಓದಿ: Accident: ಕಾರು ಅಪಘಾತ | ಸರ್ಕಾರಿ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮೃತ
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಜಿಲ್ಲಾ, ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004, 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
