
CHITRADURGA NEWS | 16 JULY 2025
ಚಿತ್ರದುರ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
2025-26ನೇ ಸಾಲಿನಲ್ಲಿ ಪದವಿ ವ್ಯಾಸಾಂಗ ಮಾಡುತ್ತಿರುವ ಪ್ರವರ್ಗ1, 2ಎ,2ಬಿ,3ಎ,3ಬಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವರ್ಗ-1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ರೂ.1 ಲಕ್ಷ ಆದಾಯ ಮಿತಿ ನಿಗದಿ ಪಡಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು https://shpkarnataka.gov.in/bcwd ವೆಬ್‌ಸೈಟ್ ನಲ್ಲಿ ಆನ್‌ಲೈನ್ ಮೂಲಕ ಆಗಸ್ಟ್ 14ರ ಒಳಗೆ ಅರ್ಜಿ ಸಲ್ಲಿಸಬೇಕು. ಖಾಲಿ ಸ್ಥಾನಗಳು, ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು ವಿವಿರ, ಸರ್ಕಾರ ಆದೇಶ ವೀಕ್ಷಣೆಗೆ ವೆಬ್‌ಸೈಟ್ https://bcwdkarnataka.gov.in ಭೇಟಿ ನೀಡಬಹುದು.
ಇದನ್ನೂ ಓದಿ: ಭದ್ರಾ ಜಲಾಶಯದಿಂದ ವಿವಿ ಸಾಗರಕ್ಕೆ ನೀರು ಹರಿಸಲು ಅನುಮತಿ | 4.21 TMC ನೀರೆತ್ತಲು ಅವಕಾಶ
ಅರ್ಜಿ ಸಲ್ಲಿಸುವ ವೇಳೆಯಲ್ಲಿ ತಾಂತ್ರಿಕ ದೋಷ ಕಂಡುಬಂದರೆ bcwdhelpline@gmail.com ಮೇಲ್ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005ಗೆ ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

