
CHITRADURGA NEWS | 02 JUNE 2024
ಚಿತ್ರದುರ್ಗ: ಬೆಂಗಳೂರು ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘ ಹಾಗೂ ಶ್ರೀ ಗುಬ್ಬಿ ತೋಟದಪ್ಪನವರ ಧರ್ಮಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ವೀರಶೈವ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗದಲ್ಲಿ ವ್ಯಾಸಂಗ ಮಾಡುತ್ತಿರುವ ವೀರಶೈವ ಸಮಾಜದಲ್ಲಿರುವ ಪ್ರತಿಭಾವಂತ ಹಾಗೂ ಬಡ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಾತಿ ಕಲ್ಪಿಸಲಾಗಿದೆ. 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಖಾಲಿಯಿರುವ ಸ್ಥಾನಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಮತ ಎಣಿಕೆ ಕಾರ್ಯಕ್ಕೆ ದಿನಗಣನೆ | ಮಧ್ಯಾಹ್ನದೊಳಗೆ ಫಲಿತಾಂಶ ಘೋಷಣೆ ಸಾಧ್ಯತೆ

ಆಸಕ್ತರು ಶಿವಮೊಗ್ಗ ನಗರದ ನವುಲೆ ಡಾಲರ್ಸ್ ಕಾಲೋನಿ ಹಿಂಭಾಗದಲ್ಲಿರುವ ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘದ ವಸತಿನಿಲಯದಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜೂನ್30 ರೊಳಗಾಗಿ ಸಲ್ಲಿಸುವಂತೆ ಸಂಘದ ಕಾರ್ಯದರ್ಶಿ ಡಾ.ಶಿವಯೋಗಿ ಬಿ.ಯಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
