
CHITRADURGA NEWS | 03 JUNE 2026
ಚಿತ್ರದುರ್ಗ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಗೆ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಾಣ ಮಾಡಿಕೊಡಲು ಗುರಿ ನಿಗದಿಪಡಿಸಲಾಗಿದೆ.
ಇದನ್ನೂ ಓದಿ: ಮುಂಗಾರು ಚುರುಕು | ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ | ಡಿಸಿ
ಜಿಲ್ಲಾಧಿಕಾರಿಗಳ ಆಯ್ಕೆ ಸಮಿತಿಯ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ವಸತಿ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿಯ ಸಮುದಾಯದ ಅರ್ಹ ಅಲೆಮಾರಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಹೊಸದುರ್ಗದ “ಸಹಾಯಕರ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ” ಕಚೇರಿಯಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ, ಜೂನ್ 30 ರ ಒಳಾಗಿ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ: ಮಕ್ಕಳ ಹಬ್ಬ | ಮರಳಿ ಶಾಲೆಗೆ ಬಂದ ಮಕ್ಕಳಿಗೆ ಸಂಭ್ರಮದ ಸ್ವಾಗತ
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08199-230050 ಸಂಪರ್ಕಿಸಬಹುದು ಎಂದು ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
