
CHITRADURGA NEWS | 07 NOVEMBER 2024
ಚಿತ್ರದುರ್ಗ: ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ 2024-25ನೇ ಸಾಲಿಗೆ ಚಿತ್ರದುರ್ಗ ನಗರಸಭೆ(City Council) ನಿಧಿಯಡಿ ಕ್ರೀಯಾ ಯೋಜನೆ ರೂಪಿಸಿ ಪ್ರೋತ್ಸಾಹ ಹಾಗೂ ಸಹಾಯಕ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2024ರ ಡಿಸೆಂಬರ್ 07 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
ಕ್ಲಿಕ್ ಮಾಡಿ ಓದಿ: ತೊಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣಬಸಪ್ಪ ಬೋಗಿ ಅಮಾನತು
ನಗರಸಭೆಯ ನಿಧಿಯ ಶೇಕಡ 24.10 ಮತ್ತು 7.25 ಕ್ರಿಯಾ ಯೋಜನಡೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ, ಎಸ್.ಎಸ್.ಎಲ್.ಸಿ ಇಂದ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಶೇ.5ರ ಕ್ರೀಯಾ ಯೋಜನೆಯಡಿ ಅಂಗವಿಕಲರು, ಪೊಲೀಯೊಗೆ ತುತ್ತಾದವರಿಗೆ ಕೃತಕ ಪಾದ ಮತ್ತು ಇತರೆ ಅಂಗಾಗಗಳ ಜೋಡಣೆಗೆ ತಗಲುವ ಮೊತ್ತಕ್ಕೆ ಸಹಾಯಧನ ನೀಡಲಾಗುವುದು.
ಅರ್ಜಿ ನಮೂನೆ ಮತ್ತು ಬಾಕಿ ಉಳಿದಿರುವ ಅನುದಾನ ವಿವಿಧ ಸೌಲಭ್ಯಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಚೇರಿಯ ವಿಷಯ ನಿರ್ವಾಹಕರು ಅಥವಾ ವೆಬ್ ಸೈಟ್ http://www.chitradurgacity.
ಕ್ಲಿಕ್ ಮಾಡಿ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಕಡಿತ ! ಇಲ್ಲಿವೆ ಸುಲಭವಾಗಿ ಅರ್ಥವಾಗುವ 8 ಅಂಶಗಳು
ಚಿತ್ರದುರ್ಗ ನಗರ ವ್ಯಾಪ್ತಿಯ ಸಾರ್ವಜನಿಕರು ನಿಗಧಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಕಡೆಯ ದಿನದ ಒಳಗಾಗಿ ಸಲ್ಲಿಸುವಂತೆ ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
