CHITRADURGA NEWS | 16 MAY 2026
ಚಿತ್ರದುರ್ಗ: ನಗರದ ಜಗದ್ಗುರು ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಶ್ರೀ ಜಯದೇವ ವಿದ್ಯಾರ್ಥಿ ನಿಲಯದಲ್ಲಿ 2026-27ನೇ ಸಾಲಿಗೆ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಬೆಂಬಲ ಬೆಲೆಯಡಿ ಸೂರ್ಯಕಾಂತಿ ಖರೀಧಿ
ರಾಷ್ಟ್ರೀಯ ಹೆದ್ದಾರಿ 4 ಮತ್ತು 13ಕ್ಕೆ ಹೊಂದಿಕೊಂಡಿರುವ ಚಿತ್ರದುರ್ಗ ಶ್ರೀಮುರುಘಾಮಠದ ಪ್ರಶಾಂತವಾಗಿರುವ ಸುಂದರ ಹಸಿರು ವಾತಾವರಣದಲ್ಲಿ ವಿದ್ಯಾರ್ಥಿ ನಿಲಯವಿದ್ದು, 1ನೆ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡುವ ಸರ್ವ ಜನಾಂಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
2026-27ನೇ ಸಾಲಿನಲ್ಲಿ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಪಡೆಯಲಿಚ್ಚಿಸುವ ಆಸಕ್ತರು ನಿಲಯಪಾಲಕರು, ಶ್ರೀ ಜಯದೇವ ವಿದ್ಯಾರ್ಥಿ ನಿಲಯ, ಶ್ರೀ ಮುರುಘಾಮಠ, ಚಿತ್ರದುರ್ಗ, ದೂ. 9538421222 ಇವರನ್ನು ಸಂಪರ್ಕಿಸಬಹುದು ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
