ಮುಖ್ಯ ಸುದ್ದಿ
ಸಾಗರೋತ್ತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
CHITRADURGA NEWS | 25 MAY 2024
ಚಿತ್ರದುರ್ಗ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು 2024-25 ನೇ ಸಾಲಿನ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆಗೆ (NOS) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ: ಪೈ ಶೋ ರೂಂ ಬಳಿ ಕಾಣಿಸಿಕೊಂಡ ಪೈಥಾನ್ | ಮಾರುಕಟ್ಟೆಗೆ ಬಂದ 8 ಅಡಿ ಉದ್ದದ ಹೆಬ್ಬಾವು
ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ. ರಾಷ್ಟ್ರೀಯ ಸಾಗರೋತ್ತರ ಅರ್ಜಿಗಳನ್ನು ಸಲ್ಲಿಸಲು 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.
ಇದನ್ನೂ ಓದಿ: ಆಹಾರ ಸುರಕ್ಷತೆ ನೊಂದಣಿ ಕಡ್ಡಾಯ | ಶಾಲೆ, ಹಾಸ್ಟೆಲ್, ಅಂಗನವಾಡಿಳಿಗೆ ಸೂಚನೆ
ಸಾಗರೋತ್ತರ ಪದವಿ, ಪಿ.ಹೆಚ್.ಡಿ ಉನ್ನತ ವ್ಯಾಸಾಂಗಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು https://overseas.tribal.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.