ಮುಖ್ಯ ಸುದ್ದಿ
Scholarship; ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
CHITRADURGA NEWS | 19 SEPTEMBER 2024
ಚಿತ್ರದುರ್ಗ: 2024-25ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ(Scholarship)ಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: upgrade; ಕೇಂದ್ರೀಯ ಹಂಜಿ ಕಾರ್ಯಾಗಾರಕ್ಕೆ ಸಂಸದ ಗೋವಿಂದ ಕಾರಜೋಳ ಭೇಟಿ | ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳುವೆ
ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ ಸ್ಟೇಟ್ ಸ್ಕಾಲರ್‌ಶಿಫ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಆಯಾ ಶಾಲೆಯ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಲು ತಿಳಿಸಿದೆ.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ವಿವರ: ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿಯ ಎಸ್.ಎ.ಟಿ.ಎಸ್ ( SATS) ಸಂಖ್ಯೆ, ಆಧಾರ್ ಕಾರ್ಡ್, ತಂದೆ-ತಾಯಿ ಅಥವಾ ಪೋಷಕರ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಮೊಬೈಲ್ ನಂಬರ್, 1 ರಿಂದ 8ನೇ ತರಗತಿಯವರೆಗೆ ವಿದ್ಯಾರ್ಥಿಗಳ ಕುಟುಂಬದ ಆದಾಯ ರೂ.6ಲಕ್ಷ ಹಾಗೂ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ಕುಟುಂಬದ ಆದಾಯ ರೂ.2.50 ಲಕ್ಷ ಮೀರಿರಬಾರದು.
ಕ್ಲಿಕ್ ಮಾಡಿ ಓದಿ: District level; ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ | ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಸ್ನೇಹ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ತನಿಷಾ
ಕಡ್ಡಾಯವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ನ್ನು ಎನ್.ಪಿ.ಸಿ.ಐ (NPCI) ನಲ್ಲಿ ಸೀಡಿಂಗ್ ಮಾಡಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಚಿತ್ರದುರ್ಗ ಸಹಾಯಕ ನಿರ್ದೇಶಕರು(ಗ್ರೇಡ್-1) ತಿಳಿಸಿದ್ದಾರೆ.