ಚಿತ್ರದುರ್ಗ ನ್ಯೂಸ್.ಕಾಂ: ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವವರನ್ನು ಆಯ್ಕೆ ಮಾಡಿ, ಜಿಲ್ಲಾ ಮಟ್ಟದಲ್ಲಿ ನವೆಂಬರ್ 01 ರಂದು ನಡೆಯುವ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲು ನಿರ್ಧರಿಸಿದ್ದು, ಇದಕ್ಕಾಗಿ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ನಿಷೇಧಾಜ್ಞೆ ನಡುವೆ ಶೂನ್ಯಪೀಠಾರೋಹಣ
ಸಾಹಿತ್ಯ, ಸಂಗೀತ, ಕಲೆ (ರಂಗಭೂಮಿ), ಜಾನಪದ, ಸಮಾಜ ಸೇವೆ, ಪರಿಸರ ಸಂರಕ್ಷಣೆ, ಕೃಷಿ, ಕ್ರೀಡೆ, ವಿಜ್ಞಾನ ತಂತ್ರಜ್ಞಾನ ಸಂಶೋಧನೆ, ವೈದ್ಯಕೀಯ, ವಿಶೇಷಚೇತನರ ಕ್ರೀಡೆ, ಚಿತ್ರಕಲೆ ಕ್ಷೇತ್ರಗಳಲ್ಲಿ ಉತ್ತಮ ಹಾಗೂ ಗಣನೀಯ ಸೇವೆ, ಸಾಧನೆಗೈದವರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಆಸಕ್ತರು ತಮ್ಮ ಹೆಸರು, ವಿಳಾಸ, ತಾವು ಸಾಧನೆ ಮಾಡಿರುವ ಕ್ಷೇತ್ರ, ಇದಕ್ಕೆ ಪೂರಕವಾಗಿರುವ ಛಾಯಾಚಿತ್ರಗಳು, ಪತ್ರಿಕಾ ವರದಿಗಳು, ಪ್ರಶಸ್ತಿಗಳು ಮುಂತಾದ ವಿವರಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ತ.ರಾ.ಸು. ರಂಗಮಂದಿರ ಆವರಣ, ಚಿತ್ರದುರ್ಗ ಇವರಿಗೆ ಅ. 30 ರಂದು ಮಧ್ಯಾಹ್ನ 12.30 ರ ಒಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number