ಮುಖ್ಯ ಸುದ್ದಿ
LAWYER; ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
CHITRADURGA NEWS | 15 JULY 2024
ಚಿತ್ರದುರ್ಗ: ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ(LAWYER) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಇದನ್ನೂ ಓದಿ: Rain Alert; ಚಿತ್ರದುರ್ಗ ಜಿಲ್ಲೆಗೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ತುಂಬುವ ಸಲುವಾಗಿ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತಿವುಳ್ಳ ಹಾಗೂ 10 ವರ್ಷಗಳ ಕಾಲ ವಕೀಲಿ ವೃತ್ತಿ ಪೂರೈಸಿದ ಅರ್ಹ ವಕೀಲರು ಇದೇ ಜುಲೈ 30ರ ಸಂಜೆ 5.30 ರೊಳಗಾಗಿ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು.