
CHITRADURGA NEWS | 12 FEBRUARY 2026
ಚಿತ್ರದುರ್ಗ: ಚಳ್ಳಕೆರೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (GTTC) ಮುಂಬರುವ ಶೈಕ್ಷಣಿಕ ಸಾಲಿಗೆ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಫೆಬ್ರವರಿ 12 | ಹತ್ತಿ ರೇಟ್ ಎಷ್ಟಿದೆ?
ಡಿಟಿಡಿಎಂ-ಯಾಂತ್ರಿಕ ಇಂಜಿನಿಯರಿಂಗ್ (ಬಿ.ಇ/ಎಂ.ಟೆಕ್-ಮೆಕಾನಿಕಲ್), ಡಿಎಂಸಿಹೆಚ್-ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ (ಬಿ.ಇ/ಎಂ.ಟೆಕ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಬಯೋಡೇಟಾ ಮತ್ತು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಕಾಲೇಜಿಗೆ ಭೇಟಿ ನೀಡಬಹುದು ಅಥವಾ ಇ-ಮೇಲ್ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಜಿಟಿಟಿಸಿ ನಿಯಮಾನುಸಾರ ವೇತನ ನೀಡಲಾಗುವುದು.
ಇದನ್ನೂ ಓದಿ: ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7625008641, 8147384716 ಗೆ ಸಂಪರ್ಕಿಸಬಹುದು ಎಂದು ಚಳ್ಳಕೆರೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
