ಮುಖ್ಯ ಸುದ್ದಿ
ಚಿತ್ರದುರ್ಗ ಮೆಡಿಕಲ್ ಕಾಲೇಜು ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ
CHITRADURGA NEWS | 19 DECEMBER 2024
ಚಿತ್ರದುರ್ಗ: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ಭಾಗಗಳಲ್ಲಿ ಬೋಧಕ ಹುದ್ದೆಗಳಿಗೆ ಗುತ್ತಿಗೆ ಆಧಾರ/ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು 2025ರ ಜನವರಿ 01ರ ಸಂಜೆ 5 ಗಂಟೆಯ ಒಳಗಾಗಿ ಅರ್ಜಿಗಳನ್ನು ಸಂಸ್ಥೆಗೆ ತಲುಪಿಸುವುದು. ಸಂದರ್ಶನದ ದಿನಾಂಕವನ್ನು ಸಂಸ್ಥೆಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು.
ಇದನ್ನೂ ಓದಿ: ಆಡುಮಲ್ಲೇಶ್ವರ ಮೃಗಾಲಯ | ಪ್ರಾಣಿ ದತ್ತು ಪಡೆಯಲು ಸುವರ್ಣಾವಕಾಶ | ಯಾವ ಪ್ರಾಣಿಗೆ ಎಷ್ಟು ರೇಟ್ ?
ಅರ್ಹತೆ, ಮೀಸಲಾತಿ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಜಾಲತಾಣ https://cmcrichitradurga.karnataka.gov.in ನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೊಧನಾ ಸಂಸ್ಥೆಯ ನಿರ್ದೇಶಕ ಡಾ.ಯುವರಾಜ್ ತಿಳಿಸಿದ್ದಾರೆ.