
CHITRADURGA NEWS | 03 SEPTEMBER 2026
ಚಿತ್ರದುರ್ಗ: ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣೆ ಹವ್ಯಾಸವನ್ನು ಉತ್ತೇಜಿಸುವ ಉದ್ದೇಶದಿಂದ ಅಂಚೆ ಇಲಾಖೆಯು ‘ದೀನ್ ದಯಾಳ್ ಸ್ಪರ್ಶ ಯೋಜನೆ’ಯಡಿ 6 ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ: ಸೆ.5ರಿಂದ ಎರಡು ದಿನ ಚಿತ್ರ ಕಲರವ ಚಿತ್ರಕಲಾ ಪ್ರದರ್ಶನ
ಅಂಚೆ ಚೀಟಿ ಸಂಗ್ರಹಣೆಯ ಸಾಮಥ್ರ್ಯ ಮತ್ತು ಸಂಶೋಧನಾ ಮನೋಭಾವವನ್ನು ಬೆಳೆಸುವ ಈ ಯೋಜನೆಯಡಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.6,000 ವಿದ್ಯಾರ್ಥಿವೇತನ ದೊರೆಯಲಿದೆ.
2025-26ರ ಶೈಕ್ಷಣಿಕ ಸಾಲಿನಲ್ಲಿ ಶೇ.60ರಷ್ಟು ಅಂಕ ಗಳಿಸಿರುವ ಹಾಗೂ ಅಂಚೆ ಚೀಟಿ ಸಂಗ್ರಹಣಾ ಠೇವಣಿ ಖಾತೆ ಅಥವಾ ಕ್ಲಬ್ ಸದಸ್ಯತ್ವ ಹೊಂದಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಮೊದಲ ಹಂತದಲ್ಲಿ ‘ಫಿಲಾಟೆಲಿಕ್ ರಸಪ್ರಶ್ನೆ ಸ್ಪರ್ಧೆ’ಯ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನವಾಗಿದೆ.
ಆಸಕ್ತರು ಹೆಚ್ಚಿನ ವಿವರಗಳಿಗೆ www.indiapost.gov.in ಅಥವಾ https://app.indiapost.gov.in/
ಇದನ್ನೂ ಓದಿ: ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ 23 ಕೋಟಿ ರೂ. ಅನುದಾನ | ಯಾವ ರಸ್ತೆ ಇಲ್ಲಿದೆ ಡೀಟೇಲ್ಸ್
ಹೆಚ್ಚಿನ ಮಾಹಿತಿಗಾಗಿ ಅಂಚೆ ಅಧೀಕ್ಷಕರ ಕಚೇರಿ (ಚಿತ್ರದುರ್ಗ ವಿಭಾಗ) ಅಥವಾ ಕಚೇರಿ ಸಹಾಯಕರಾದ ಸಂತೋಷ್ ಮೊ 9164243697 ಅವರನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ವಿಭಾಗದ ಅಂಚೆ ಅಧೀಕ್ಷಕರಾದ ಕೆ.ಆರ್. ಉಷಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

