ಮುಖ್ಯ ಸುದ್ದಿ
ತೋಟಗಾರಿಕೆ ಇಲಾಖೆಯಲ್ಲಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
CHITRADURGA NEWS | 28 JUNE 2024
ಚಿತ್ರದುರ್ಗ: 2024-25ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು | ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಕೇಸರಿ ಪಡೆ ಆಕ್ರೋಶ
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ದಾಳಿಂಬೆ, ಅಂಗಾಂಶ ಬಾಳೆ, ಡ್ರ್ಯಾಗನ್ ಪ್ರೂಟ್ ಹಣ್ಣಿನ ಬೆಳೆಗಳು, ಹೈಬ್ರಿಡ್ ತರಕಾರಿ, ಸುಗಂಧರಾಜ ಹೂಗಳು, ಬಿಡಿ ಹೂವುಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮಕ್ಕೆ ಮತ್ತು ಸಮುದಾಯ ನೀರು ಸಂಗ್ರಹಣಾ ಘಟಕ, ವೈಯಕ್ತಿಕ ನೀರು ಸಂಗ್ರಹಣಾ ಘಟಕ, ಪ್ಲಾಸ್ಟಿಕ್ ಮಲ್ಚಿಂಗ್, ನೆರಳುಪರದೆ, ಪಾಲಿಹೌಸ್, 20ಹೆಚ್.ಪಿ ವರೆಗಿನ ಟ್ರ್ಯಾಕ್ಟರ್, ಪ್ಯಾಕ್‍ಹೌಸ್ ಹಾಗೂ ಈರುಳ್ಳಿ ಶೇಖರಣ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಕ್ಲೈಮ್ಯಾಕ್ಸ್ ಹಂತಕ್ಕೆ ‘ಮೆಜೆಸ್ಟಿಕ್–2’ | ಹಿರಿಯ ನಟಿ ಶ್ರುತಿ ಎಂಟ್ರಿ
ಅರ್ಜಿಗಳನ್ನು ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಲ್ಲಿಸಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.