
ಚಿತ್ರದುರ್ಗ ನ್ಯೂಸ್.ಕಾಂ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನೂನು ಅಭಿರಕ್ಷಕ ಕಚೇರಿಯಲ್ಲಿ ಆಡಳಿತ ಸಹಾಯಕ/ಗುಮಾಸ್ತ, ಸ್ವಾಗತಕಾರರು-ವ-ಡಾಟಾ ಎಂಟ್ರಿ ಆಪರೇಟರ್ ಮತ್ತು ಜವಾನ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ಅವಧಿಗೆ (6 ತಿಂಗಳು) ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.12 ಕೊನೆ ದಿನ.
ಆಡಳಿತ ಸಹಾಯಕ/ಗುಮಾಸ್ತ (1 ಹುದ್ದೆ): ಪದವಿ ವಿದ್ಯಾರ್ಹತೆ, ಕಂಪ್ಯೂಟರ್ ಕೌಶಲ್ಯ, ಉಕ್ತಲೇಖನ ತೆಗೆದುಕೊಳ್ಳುವುದು, ನ್ಯಾಯಾಲಯದಲ್ಲಿ ಪ್ರಸ್ತುತಿಗಾಗಿ ಕಡತ ಸಿದ್ದಪಡಿಸುವ ಜ್ಞಾನ ಹೊಂದಿರಬೇಕು. ಮಾಸಿಕ ₹19,000 ವೇತನ.

ಇದನ್ನೂ ಓದಿ: ಮಠ, ಪೀಠದ ಅಧಿಕಾರ ಮರಳಿ ಪಡೆದ ಮುರುಘಾ ಶರಣರು
ಸ್ವಾಗತಕಾರರು-ವ-ಡಾಟಾ ಎಂಟ್ರಿ ಆಪರೇಟರ್ (1 ಹುದ್ದೆ): ಪದವಿ ವಿದ್ಯಾರ್ಹತೆ, ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯ, ಟೈಪಿಂಗ್ ತಿಳಿದಿರಬೇಕು. ಮಾಸಿಕ ₹ 17,271 ವೇತನ. ಜವಾನ (1 ಹುದ್ದೆ): ಎಸ್‍ಎಸ್‍ಎಲ್‍ಸಿ ಪಾಸಾಗಿರಬೇಕು. ಮಾಸಿಕ ₹15,202 ವೇತನ.
ಡಿ.12 ಸಂಜೆ 5ಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನ. ಆಸಕ್ತರು ತಮ್ಮ ವೈಯಕ್ತಿಕ ವಿವರಗಳೊಂದಿಗೆ ಸ್ವ ಹಸ್ತಾಕ್ಷರದಿಂದ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಪಾಸ್‌ಪೋರ್ಟ್ ಅಳತೆಯ 2 ಇತ್ತೀಚಿನ ಭಾವಚಿತ್ರಗಳೊಂದಿಗೆ ಅರ್ಜಿಯನ್ನು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿತ್ರದುರ್ಗ ಇವರಿಗೆ ಸಲ್ಲಿಸಬಹುದಾಗಿದೆ.
ಅವಧಿ ಮುಗಿದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
