ಚಿತ್ರದುರ್ಗ ನ್ಯೂಸ್.ಕಾಂ: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 9 ಮತ್ತು 11ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
https://cbseitms.nic.in/2023/nvsxi_11/PrincipalLogin/getafflictionno ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು. ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿರುವ ಸರ್ಕಾರ, ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 2023-24ರ ಶೈಕ್ಷಣಿಕ ಅವಧಿಯಲ್ಲಿ 8 ಮತ್ತು 10 ನೇ ತರಗತಿಯಲ್ಲಿ ಓದುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಬಾಲಕಿ ಮೇಲೆ ಟಾಯ್ಲೆಟ್ ಆಸಿಡ್ ಪ್ರಕರಣ | ಮುಖ್ಯ ಶಿಕ್ಷಕ ಅಮಾನತು
9ನೇ ತರಗತಿಗೆ ಅರ್ಜಿ ಸಲ್ಲಿಸಲು 2009 ಮೇ 5 ರಿಂದ 2011ರ ಜುಲೈ 31 ರ ನಡುವೆ ಜನಿಸಿರಬೇಕು. 11ನೇ ತರಗತಿಗೆ ಅರ್ಜಿ ಸಲ್ಲಿಸಲು 2007ರ ಜೂನ್ 1 ರಿಂದ 2009ರ ಜುಲೈ 31 ರ ನಡುವೆ ಜನಿಸಿರಬೇಕು. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಆಯ್ಕೆ ಪರೀಕ್ಷೆಯು 2024ರ ಫೆಬ್ರವರಿ 10 ರಂದು ನಡೆಯಲಿದೆ.
8 ನೇ ತರಗತಿ ವಿದ್ಯಾರ್ಥಿಗಳಿಗೆ ಆಯ್ಕೆ ಪರೀಕ್ಷೆ: ಹಿಂದಿ, ಇಂಗ್ಲಿಷ್, ಗಣಿತ ಮತ್ತು ವಿಜ್ಞಾನ ಓಎಂಆರ್ ಆಧಾರಿತ ವಸ್ತುನಿಷ್ಠ ಪ್ರಕಾರ ದ್ವಿಭಾಷಾ ಪತ್ರಿಕೆ (ಹಿಂದಿ ಮತ್ತು ಇಂಗ್ಲಿಷ್) ಪಠ್ಯಕ್ರಮ ಮತ್ತು ಆಯ್ಕೆಯ ಮಾನದಂಡಗಳಿಗಾಗಿ ಎನ್‍ವಿಎಸ್ ಅಧಿಸೂಚನೆಯನ್ನು ನೋಡಬಹುದು.
10ನೇ ತರಗತಿ ವಿದ್ಯಾರ್ಥಿಗಳಿಗೆ ಆಯ್ಕೆ ಪರೀಕ್ಷೆ:
ಮಾನಸಿಕ ಸಾಮಥ್ರ್ಯ, ಇಂಗ್ಲಿಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಒಎಂಆರ್ ಆಧಾರಿತ ವಸ್ತುನಿಷ್ಠ ಪ್ರಕಾರ ದ್ವಿಭಾಷಾ ಪತ್ರಿಕೆ (ಹಿಂದಿ ಮತ್ತು ಇಂಗ್ಲಿಷ್) ಪಠ್ಯಕ್ರಮ ಮತ್ತು ಆಯ್ಕೆಯ ಮಾನದಂಡಗಳಿಗಾಗಿ ಎನ್‍ವಿಎಸ್ ಅಧಿಸೂಚನೆಯನ್ನು ನೋಡಬಹುದು.
10ನೇ ತರಗತಿ ಅಧ್ಯಯನದ ಜಿಲ್ಲೆ ಮತ್ತು ನಿವಾಸ ಒಂದೇ ಆಗಿದ್ದರೆ, ನಂತರ ಮಾತ್ರ ಅಭ್ಯರ್ಥಿಯನ್ನು ಜಿಲ್ಲಾ ಮಟ್ಟದ ಮೆರಿಟ್‍ಗೆ ಪರಿಗಣಿಸಲಾಗುತ್ತದೆ ಎಂದು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
