ಚಿತ್ರದುರ್ಗ ನ್ಯೂಸ್.ಕಾಂ: 2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ (ಅಡಿಕೆ ಬೆಳೆ ಹೊರತುಪಡಿಸಿ) ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳಲು ಸರ್ಕಾರದ ಸಹಾಯಧನ ಪಡೆಯಲು ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ.90ರ ಸಹಾಯಧನ, ಇತರೆ ವರ್ಗದ ರೈತರಿಗೆ ಶೇ.75ರಷ್ಟು ಸಹಾಯಧನ ದೊರೆಯಲಿದೆ.
ಇದನ್ನೂ ಓದಿ: ರಾಜ್ಯದ ಪ್ರಮುಖ ಮಾರುಕಟ್ಟೆಗಳ ಅಡಿಕೆ ಧಾರಣೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಈ ಹಿಂದೆ ಅಂದರೆ 7 ವರ್ಷಗಳ ಹಿಂದೆ ಸಹಾಯಧನ ಪಡೆದ ಫಲಾನುಭವಿಗಳು ಪುನಃ ಅರ್ಜಿಗಳನ್ನು ಸಲ್ಲಿಸಿ ಸಹಾಯಧನ ಪಡೆಯಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಭೇಟಿ ಮಾಡಿ ಅವಶ್ಯ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
