CHITRADURGA NEWS | 27 JUNE 2025
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನ ಸಂಘದಿಂದ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಯ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ: ಬಿ.ಡಿ.ರಸ್ತೆಗೆ ಈಗಾಗಲೇ ಡಾ.ವಿಷ್ಣುವರ್ಧನ್ ಹೆಸರು ಇಟ್ಟಾಗಿದೆ | ಮೋದಿ ಹೆಸರಿಗೆ ವಿಷ್ಣು ಬಳಗದ ಆಕ್ಷೇಪ
SSLC ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಅಂಕ ಹಾಗೂ PUC ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದವರು ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ದೃಢೀಕರಿಸಿದ ಅಂಕಪಟ್ಟಿ, ಆಧಾರ್ ಕಾರ್ಡ್, ಟಿಸಿ ಮತ್ತು ಭಾವಚಿತ್ರ ಲಗತ್ತಿಸಬೇಕು.
ಅರ್ಜಿಯನ್ನು 01 ಜುಲೈ 2025 ರಿಂದ 30 ಸೆಪ್ಟಂಬರ್ 2025 ರೊಳಗಾಗಿ ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನಸಂಘದ ಕಚೇರಿಗೆ ಸಲ್ಲಿಸಲು ಕಾರ್ಯದರ್ಶಿಗಳಾದ ಜೆ.ಪರಶುರಾಮ ಮತ್ತು ಡಿ.ಕೆ.ಶೀಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
