CHITRADURGA NEWS | 30 JUNE 2026
ಚಿತ್ರದುರ್ಗ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ‘ಅರಿವು’ ಶೈಕ್ಷಣಿಕ ಸಾಲ ಯೋಜನೆಗೆ ಕ್ರಿಶ್ಚಿಯನ್ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ವೀರಶೈವ ಲಿಂಗಾಯತ ಪಂಚಮಸಾಲಿ ಕ್ಷೇಮಾಭಿವೃದ್ದಿ ಸಮಾಜದಿಂದ SSLC, PUC ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ FRESH/CET/NEET/JEE ಮೂಲಕ ಆಯ್ಕೆಯಾದ ಎಂಬಿಬಿಎಸ್, ಎಂ.ಡಿ/ಎಂ.ಎಸ್ ಕೋರ್ಸುಗಳಿಗೆ ಸರ್ಕಾರಿ, ಖಾಸಗಿ ಹಾಗೂ ಮ್ಯಾನೇಜ್‍ಮೆಂಟ್ ಕೋಟಾದಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ.5 ಲಕ್ಷದವರೆಗೆ ಸಾಲ ಸೌಲಭ್ಯ ದೊರೆಯಲಿದೆ. ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಈ ಯೋಜನೆ ಅನ್ವಯಿಸಲಿದೆ.
ಅರ್ಹ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ www.kccdconline.karnataka.gov.
ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್‍ನೊಂದಿಗೆ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ವಾರ್ಷಿಕ ಆದಾಯ ₹8 ಲಕ್ಷದ ಒಳಗಿರಬೇಕು), ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರಗಳು, CET/NEET/JEE ಹಾಲ್ ಟಿಕೆಟ್, ನೋಟರಿಯೊಂದಿಗೆ ಮಾಡಿಸಿದ ಇಂಡೆಮ್ನಿಟಿ ಬಾಂಡ್ ಹಾಗೂ ವಿದ್ಯಾರ್ಥಿ ಮತ್ತು ಪೋಷಕರ ಸ್ವಯಂ ಘೋಷಣಾ ಪತ್ರ ಸಲ್ಲಿಸಬೇಕು.
ಇದನ್ನೂ ಓದಿ: ಮರ್ಚೆಂಟ್ಸ್ ಬ್ಯಾಂಕ್ | ವರ್ಷಾಂತ್ಯದಲ್ಲಿ ಅಮೃತ ಮಹೋತ್ಸವ | ಅಧ್ಯಕ್ಷ ರಘುರಾಮರೆಡ್ಡಿ
ಈ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, 2ನೇ ಮಹಡಿ, ಜಿಲ್ಲಾ ಪಂಚಾಯತ್ ಕಾರ್ಯಾಲಯ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-226412, ಮೊಬೈಲ್ ಸಂಖ್ಯೆ 8277944213 ಕ್ಕೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕ್ರಿಶ್ವಿಯನ್ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
