CHITRADURGA NEWS | 11 MARCH 2024
ಚಿತ್ರದುರ್ಗ: ಉದ್ಯೋಗಾಂಕ್ಷಿ ಟೆಕ್ನಿಶಿಯನ್ಗಳಿಗೆ ರೈಲ್ವೇ ಇಲಾಖೆಯಲ್ಲಿ ಭರ್ಜರಿ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ರೈಲ್ವೇ ಇಲಾಖೆಯ ಕೇಂದ್ರಿಕೃತ ಕಚೇರಿ ಈ ಅಧಿಸೂಚನೆ ಹೊರಡಿಸಿದೆ.
ರೈಲ್ವೇ ಇಲಾಖೆಯಲ್ಲಿ ಒಟ್ಟು 9144 ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ.
2024 ಮಾರ್ಚ್ 9 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, 2024 ಏಪ್ರಿಲ್ 9 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: ವಾಗ್ವಾದಕ್ಕೆ ಕಾರಣವಾದ ಸಂವಾದ
ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ ಹುದ್ದೆಗಳಿಗೆ 1092 ಮಂದಿ ಹಾಗೂ ಟೆಕ್ನಿಷಿಯನ್ ಗ್ರೇಡ್-3 ಹುದ್ದೆಗಳಿಗೆ 8052 ಮಂದಿಯನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಎಲ್ಲಾ ಹುದ್ದೆಗಳಿಗೆ ಅರ್ಹ ಮಹಿಳಾ, ಪುರುಷ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತರು ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನೂ ಟೆಕ್ನಿಷಿಯನ್ ಗ್ರೇಡ್-1 ಹುದ್ದೆಗಳಿಗೆ 18 ರಿಂದ 36 ವರ್ಷ ವಯೋಮಿತಿ, ಟೆಕ್ನಿಷಿಯನ್ ಗ್ರೇಡ್-3 ಹುದ್ದೆಗಳಿಗೆ ವಯೋಮಿತಿ 18 ರಿಂದ 33 ವರ್ಷಗಳಿದೆ. ಬೇರೆ ಬೇರೆ ಮೀಸಲು ವರ್ಗಗಳಿಗೆ ಪ್ರತ್ಯೇಕ ವಯೋಮಿತಿ ನಿಗಧಿ ಮಾಡಲಾಗಿದೆ.
ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಶೀಘ್ರದಲ್ಲೇ ವೇಳಾಪಟ್ಟಿ
ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 500 ರೂ. ನಿಗಧಿಯಾಗಿದ್ದರೆ, ಎಸ್ಸಿ, ಎಸ್ಟಿ ಹಾಗೂ ಇತರೆ ವರ್ಗದ ಅಭ್ಯರ್ಥಿಗಳಿಗೆ 250 ರೂ.ಗಳನ್ನು ನಿಗಧಿ ಮಾಡಲಾಗಿದೆ.
ಟೆಕ್ನಿಷಿಯನ್ ಗ್ರೇಡ್-1 ಹುದ್ದೆಗಳಿಗೆ ಬಿಎಸ್ಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಇನಗಗ ಇಂಜಿನಿಯರಿಂಗ್ ಅಥವಾ ನಿಗಧಿತ ವಿಷಯದಲ್ಲಿ ಇಂಜಿನಿಯರಿಂಗ್ ಆಗಿರಬೇಕು.
ಇದನ್ನೂ ಓದಿ: ಮೊದಲ ಪಟ್ಟಿಯಲ್ಲಿ ಚಿತ್ರದುರ್ಗದ ಅಭ್ಯರ್ಥಿ ಹೆಸರಿಲ್ಲ !
ಟೆಕ್ನಿಷಿಯನ್ ಗ್ರೇಡ್-3 ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ ಜೊತೆಗೆ ನಿಗಧಿತ ವಿಷಯಗಳೊಂದಿಗೆ ಐಟಿಐ ತೇರ್ಗಡೆಯಾಗಿರಬೇಕು. ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತಿಲ್ಲ.
ಈ ಎಲ್ಲಾ ಹುದ್ದೆಗಳಿಗೆ ಮೂರು ಹಂತದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಕಂಪ್ಯೂಟರ್ ಆಧಾರಿತ(ಸಿಬಿಟಿ) ಪರೀಕ್ಷೆ, ದಾಖಲಾತಿಗಳ ತಪಾಸಣೆ ಹಾಗೂ ಮೆಡಿಕಲ್ ಟೆಸ್ಟ್ ಇರಲಿದೆ.
ಇದನ್ನೂ ಓದಿ: ಭದ್ರಾ ಕಾಮಗಾರಿ ಆರಂಭ | ಟ್ರಬಲ್ ಶೂಟರ್ ಡಿಕೆಶಿ ಮಾತುಕತೆ ಫಲಪ್ರದ
ರೈಲ್ವೇ ನೇಮಕಾತಿ ಮಂಡಳಿಗಳು ಈ ನೇಮಕಾತಿ ಮಾಡಿಕೊಳ್ಳಲಿದ್ದು, ಸಂಬಂಧಿತ ರೈಲ್ವೇ ಮಂಡಳಿಯ ವೆಬ್ಸೈಟ್ಗಳಿಗೆ ಆಯಾ ರಾಜ್ಯಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬೇಕಿದೆ.
ಬೆಂಗಳೂರು ವಲಯಕ್ಕೆ www.rrbbnc.gov.in ವೆಬ್ಸೈಟ್ ಮೂಲಕ ಹುದ್ದೆಗಳ ವರ್ಗೀಕರಣ, ಪರೀಕ್ಷಾ ವಿಧಾನ, ಪಠ್ಯಕ್ರಮ ಸೇರಿದಂತೆ ಹೆಚ್ಚಿನ ವಿವರಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಿ ಪರೀಕ್ಷೆಗೆ ಸಿದ್ಧರಾಗಬಹುದು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
