CHITRADURGA NEWS | 05 FEBRUARY 2026
ಚಿತ್ರದುರ್ಗ: ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಕನ್ನಡ ಮಾಧ್ಯಮ ಅಭ್ಯರ್ಥಿಗಳ ಮೀಸಲು ಶೇ.10ಕ್ಕೆ ಏರಿಸಲು ಶಿಫಾರಸ್ಸು | ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ
ಜಿಲ್ಲೆಯ ಅಧೀನದ ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು-12 ಹುದ್ದೆ, ಹಿರಿಯ ವೈದ್ಯಾಧಿಕಾರಿಗಳು-03 ಹುದ್ದೆ ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು-07 ಹುದ್ದೆಗಳು ಸೇರಿದಂತೆ ಒಟ್ಟು 22 ಹುದ್ದೆಗಳಿಗೆ ಎಂ.ಬಿ.ಬಿ.ಎಸ್ ಪದವೀಧರ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅಥವಾ ಖಾಯಂ ವೈದ್ಯರನ್ನು ನೇಮಿಸುವವರಿಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಸಂದರ್ಶನ ಮೂಲಕ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದ್ದು, ಈ ಸಂದರ್ಶನವು ಇದೇ ಫೆ.10ರಂದು ಏರ್ಪಡಿಸಲಾಗಿದೆ.
ಇಚ್ಚೆಯುಳ್ಳ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇಲ್ಲಿಗೆ ಸಂದರ್ಶನಕ್ಕೆ ಬಯೋಡಾಟ ಮತ್ತು ಹುದ್ದೆಗೆ ಸಂಬಂಧಿಸಿದ ಅಗತ್ಯ ಮೂಲ ದಾಖಲಾತಿಗಳ ಹಾಗೂ ದೃಢೀಕೃತ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಲು ಸೂಚಿಸಿದೆ.
ಇದನ್ನೂ ಓದಿ: ಮೆಡಿಕಲ್ ಕಾಲೇಜು ನೇಮಕಾತಿ | ಮಧ್ಯವರ್ತಿಗಳಿಗೆ ಬಲಿಯಾಗಬೇಡಿ | ಡಾ.ಯುವರಾಜ್
ಈ ಸಂದರ್ಶನವು ಇದೇ ಫೆ.10 ರಿಂದ ಹುದ್ದೆಗಳ ನೇಮಕಾತಿ ಪೂರ್ಣಗೊಳ್ಳುವವರೆಗೂ ಪ್ರತಿದಿನ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
