Connect with us

Application: ಪ್ರೋತ್ಸಾಹ ಧನ ವಿತರಣೆಗೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಮುಖ್ಯ ಸುದ್ದಿ

Application: ಪ್ರೋತ್ಸಾಹ ಧನ ವಿತರಣೆಗೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

 CHITRADURGA NEWS | 07 DECEMBER 2024

ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ನಿರ್ದೇಶನಾಲಯದಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2023ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕ್ಲಿಕ್ ಮಾಡಿ ಓದಿ: ಡಾ.ಬಿ.ಆರ್.ಅಂಬೇಡ್ಕರ್ ಚಿಂತನೆ ಕುರಿತು ಎಬಿವಿಪಿ ಪ್ರಬಂಧ ಸ್ಪರ್ಧೆ | ಯಾರು ಭಾಗವಹಿಸಬಹುದು ಕ್ಲಿಕ್ ಮಾಡಿ ನೋಡಿ

ಆಸಕ್ತ ಕ್ರೀಡಾಪಟುಗಳು ಅರ್ಜಿಗಳನ್ನು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಕಚೇರಿಯಿಂದ ಇದೇ ಡಿ.19 ರ ಒಳಗಾಗಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಇದೇ ಡಿ.20ರೊಳಗಾಗಿ ಕಚೇರಿಗೆ ಸಲ್ಲಿಸಲು ತಿಳಿಸಿದೆ.

ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪ್ರೋತ್ಸಾಹಧನಕ್ಕೆ ಪರಿಗಣಿಸಲಾಗುವುದಿಲ್ಲ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version