
CHITRADURGA NEWS |09 JANUARY 2026
ಚಿತ್ರದುರ್ಗ: ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಅಕಾಡೆಮಿಯ ವೆಬ್ಸೈಟ್ನಲ್ಲಿ ತಿಳಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ಧಪಡಿಸಿಕೊಡಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಿದೆ.

ಇದನ್ನೂ ಓದಿ: ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಅಹ್ವಾನ
ನಿಗದಿಪಡಿಸಿರುವ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿ 5 ಪುಟಗಳ ಸಾರಲೇಖ (Synopsis) ವನ್ನು ಬರೆದು ದಿನಾಂಕ : 23-01-2026ರ ಒಳಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560002 ಇವರಿಗೆ ಕಳುಹಿಸಿಕೊಡಲು ಕೋರಿದೆ.
ಸಾರಲೇಖ (Synopsis) ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಫೆಲೋಶಿಪ್ ಕಾರ್ಯ ನಡೆಸಲು ಆದೇಶ ನೀಡಲಾಗುವುದು. ಫೆಲೋಶಿಪ್ಗಾಗಿ ಸಾಮಾನ್ಯ– 1, ಪರಿಶಿಷ್ಟ ಜಾತಿ – 5 ಮತ್ತು ಪರಿಶಿಷ್ಟ ಪಂಗಡ – 9 ಮಂದಿಗಳು ಸೇರಿದಂತೆ 15 ಮಂದಿಗಾಗಿ ಅಭ್ಯರ್ಥಿಗಳಿಂದ ಫೆಲೋಶಿಪ್ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 09 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಅರ್ಜಿ ನಮೂನೆ, ಫೆಲೋಶಿಪ್ ಶೀರ್ಷಿಕೆಗಳು ಮತ್ತು ಇತರೆ ವಿವರಗಳಿಗಾಗಿ ಅಕಾಡೆಮಿಯ ವೆಬ್ಸೈಟ್ (https://janapada.karnataka.gov.in) ನಿಂದ ಮಾಹಿತಿ ಪಡೆಯಬಹುದಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ರಿಜಿಸ್ಟ್ರಾರ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
