CHITRADURGA NEWS | 21 AUGUST 2026
ಚಿತ್ರದುರ್ಗ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ 2026-27ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ನೀಡಲಾಗುವ ಧನಸಹಾಯ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಸೆಪ್ಟೆಂಬರ್ 04 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಮಹೋತ್ಸವ ಸಮಿತಿಗೆ ಹೊಸ ಅಧ್ಯಕ್ಷರ ಆಯ್ಕೆ
ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ ಹಾಗೂ ನೃತ್ಯ ಕಲಾಪ್ರಕಾರಗಳನ್ನು ಬೆಳೆಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಸಾಂಸ್ಕøತಿಕ ಚಟುವಟಿಕೆಗಳ ಧನಸಹಾಯ, ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣ ಖರೀದಿ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ನೀಡಲಾಗುವ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಆಸಕ್ತರು ಸೇವಾ ಸಿಂಧು ಪೋರ್ಟಲ್ Sevasindhu.karnataka.gov.in ಮೂಲಕವೇ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಸ್ಥಳ ಬದಲಾವಣೆ | ಸೆ.14 ಗಣಪತಿ ಪ್ರತಿಷ್ಠಾಪನೆ, ಅಕ್ಟೋಬರ್ 3 ರಂದು ಶೋಭಾಯಾತ್ರೆ
ಆಗಸ್ಟ್ 21 ರಿಂದ ಸೆಪ್ಟೆಂಬರ್ 04 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ನಿಗದಿತ ದಿನಾಂಕದ ನಂತರ ಬರುವ ಹಾಗೂ ಇಲಾಖೆಯ ಕಚೇರಿಗೆ ನೇರವಾಗಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

