CHITRADURGA NEWS | 19 MAY 2026
ಚಿತ್ರದುರ್ಗ: ಆರ್ಮಿ ವೆಲ್ಫೇರ್ ಎಜುಕೇಷನ್ ಸೊಸೈಟಿ ಆಶ್ರಯದಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ‘ಆರ್ಮಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ ಸಂಸ್ಥೆಯು 2026-27ನೇ ಸಾಲಿನ ವಿವಿಧ ತಾಂತ್ರಿಕ ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ: ಜಿಲ್ಲಾಸ್ಪತ್ರೆಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ದಿಢೀರ್ ಭೇಟಿ | ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸಲಹೆ
ಸ್ನಾತಕೋತ್ತರ ಡೇಟಾ ಸೈನ್ಸ್, ಕಂಪ್ಯೂಟರ್ ಎಂಜಿನಿಯರಿಂಗ್, ಸ್ನಾತಕೋತ್ತರ ವಿ.ಎಲ್.ಎಸ್.ಐ ಮತ್ತು ಎಂಬೆಡೆಡ್ (ಎಲೆಕ್ಟ್ರಾನಿಕ್ಸ್ ಮತ್ತು ಟೆಲಿ ಕಮ್ಯುನಿಕೇಷನ್) ಹಾಗೂ ಕಂಪ್ಯೂಟರ್ ಎಂಜಿನಿಯರಿಂಗ್ ವಿಷಯಗಳಲ್ಲಿ ಪಿಎಚ್.ಡಿ ವ್ಯಾಸಂಗ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾಜಿ ಸೈನಿಕರ ಅವಲಂಬಿತರಾದ ಆಸಕ್ತ ವಿದ್ಯಾರ್ಥಿಗಳು ಈ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 2026ರ ಜುಲೈ 11 ಕೊನೆಯ ದಿನವಾಗಿದೆ.
ಅರ್ಹ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ aitpune.com ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಗೋಹತ್ಯೆ ತಡೆಗೆ ಒತ್ತಾಯಿಸಿ ವಿಎಚ್ಪಿ, ಬಜರಂಗದಳದಿಂದ ಮನವಿ
ಹೆಚ್ಚಿನ ಮಾಹಿತಿಗಾಗಿ ಇದೇ ಜಾಲತಾಣವನ್ನು ಸಂಪರ್ಕಿಸಲು ಅಥವಾ ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
