CHITRADURGA NEWS | 22 may 2025
ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ
ಚಿತ್ರದುರ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಚಿತ್ರದುರ್ಗ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ವರ್ಗದ ಪಿಯುಸಿ, ಐಟಿಐ ಮತ್ತು ಡಿಪ್ಲೋಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 20 ಅರ್ಜಿ ಸಲ್ಲಿಸಲು ಕೊನೆಯ ದಿನ.

Also Read: ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ನಿರ್ದೋಷಿ | ಚಿತ್ರದುರ್ಗ ನ್ಯಾಯಾಲಯದಿಂದ ತೀರ್ಪು
ವಿದ್ಯಾರ್ಥಿಗಳು https://shp.karnataka.gov.in/
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ಕಲ್ಯಾಣ ಇಲಾಖೆ ತಾಲ್ಲೂಕು ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ
2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೇ.16 ರಿಂದ ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದ್ದು, ಜೂನ್ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
Also Read: ಖಾಸಗಿ ಶಾಲೆ ಸಂಸ್ಥೆಗಳು ಸರ್ಕಾರದ ನಿಯಮ ಪಾಲನೆ ಕಡ್ಡಾಯ | ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ | ಡಿಸಿ
ಜೂನ್ 20ರಂದು ಹೊಸ ಅರ್ಜಿಗಳನ್ನು ತಾಲ್ಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ನಡೆಸುವರು.
ಜೂನ್ 23ರಂದು ತಾಲ್ಲೂಕು ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು.
ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಜೂನ್ 30 ಕೊನೆಯ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಚಿತ್ರದುರ್ಗ ತಾಲ್ಲೂಕು ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
