CHITRADURGA NEWS | 26 MAY 2026
ಚಿತ್ರದುರ್ಗ: ಭಾರತೀಯ ಸೇನೆ ಹಾಗೂ ಒಡಿಶಾದ ಭುವನೇಶ್ವರದಲ್ಲಿರುವ ‘ಕಳಿಂಗ ಇನ್‍ಸ್ಟಿಟ್ಯೂಟ್ ಆಫ್ ಇಂಡಸ್ಟ್ರೀಯಲ್ ಟೆಕ್ನಾಲಜಿ’ (ಕೆ.ಐ.ಐ.ಟಿ) ಸಂಸ್ಥೆಗಳ ನಡುವಿನ ಒಪ್ಪಂದದನ್ವಯ 2026-27ನೇ ಸಾಲಿನ ತಾಂತ್ರಿಕ ಮತ್ತು ವೈದ್ಯಕೀಯ ಪದವಿ ವಿದ್ಯಾಭ್ಯಾಸಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | 25 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್
ಸೈನಿಕರು, ಮಾಜಿ ಸೈನಿಕರು ಹಾಗೂ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮ ಯೋಧರ ಅವಲಂಬಿತರಿಗೆ ಈ ವಿಶೇಷ ಶೈಕ್ಷಣಿಕ ಸೌಲಭ್ಯವನ್ನು ಕಲ್ಪಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಿಂದ 2030-31ರ ವರೆಗಿನ ಐದು ಶೈಕ್ಷಣಿಕ ವರ್ಷಗಳ ಅವಧಿಗೆ ಈ ಒಪ್ಪಂದ ಅನ್ವಯಿಸಲಿದೆ.
ಈ ಯೋಜನೆಯಡಿ ಟ್ಯೂಷನ್ ಫೀಸ್‍ನಲ್ಲಿ 10 ಪ್ರತಿಶತ ವಿದ್ಯಾರ್ಥಿವೇತನದೊಂದಿಗೆ 2 ಎಂ.ಬಿ.ಬಿ.ಎಸ್, 5 ಬಿ.ಡಿ.ಎಸ್ (ದಂತ ವೈದ್ಯಕೀಯ) ಮತ್ತು 5 ಬಿ.ಎಸ್ಸಿ ನಸಿರ್ಂಗ್ ಸೀಟುಗಳನ್ನು ಕಾಯ್ದಿರಿಸಲಾಗಿದೆ. ಹಾಗೆಯೇ 50 ಪ್ರತಿಶತ ವಿದ್ಯಾರ್ಥಿವೇತನದೊಂದಿಗೆ 4 ಬಿ.ಟೆಕ್ ಕಂಪ್ಯೂಟರ್ ಸೈನ್ಸ್ ಸೀಟುಗಳು ಲಭ್ಯವಿವೆ. ಇವುಗಳನ್ನು ಹೊರತುಪಡಿಸಿ ಕೆ.ಐ.ಐ.ಟಿ ಸಂಸ್ಥೆಯಲ್ಲಿ ಲಭ್ಯವಿರುವ ಇತರ ಕೋರ್ಸ್‍ಗಳಿಗೆ ಎಷ್ಟು ಸಂಖ್ಯೆಯಲ್ಲಾದರೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಸೈನಿಕ, ಮಾಜಿ ಸೈನಿಕ ಅವಲಂಬಿತರಿಂದ ವೈದ್ಯಕೀಯ/ದಂತ ವೈದ್ಯಕೀಯ ಮತ್ತು ತಾಂತ್ರಿಕ ವಿದ್ಯಾಭ್ಯಾಸಗಳಿಗೆ ಎಷ್ಟು ಅರ್ಜಿಗಳು ಸ್ವೀಕೃತಗೊಳ್ಳುತ್ತವೆಯೆಂಬುದರ ಮೇರೆಗೆ ಯುದ್ಧ/ಯುದ್ಧದಂತಹ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರ ಅವಲಂಬಿತರುಗಳ ಟ್ಯೂಷನ್ ಫೀಯಲ್ಲಿ ಗರಿಷ್ಟ 5 ಸೀಟುಗಳಿಗೆ 100 ಪ್ರತಿಶತ ವಿನಾಯಿತಿ ಇರುತ್ತದೆ.
ಇದನ್ನೂ ಓದಿ: ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುಚೇತ ನೇಮಕ
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಜಾಲತಾಣ “kiit.ac.in” ಅನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
