ಮುಖ್ಯ ಸುದ್ದಿ
POSTS; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ 215 ಹುದ್ದೆಗಳಿಗೆ ಅರ್ಜಿ ಆಹ್ವಾನ
CHITRADURGA NEWS | 30 JULY 2024
ಚಿತ್ರದುರ್ಗ: ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಸೂರ್ಯಕಾಂತಿ ಬೆಳೆ ಇಳುವರಿ ಹೆಚ್ಚಿಸಬೇಕೆ.. ಇಲ್ಲಿದೆ ಸಲಹೆ
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.
ಜಿಲ್ಲೆಯ ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 63 ಅಂಗನವಾಡಿ ಕಾರ್ಯಕರ್ತೆ, 3 ಮಿನಿ ಅಂಗನವಾಡಿ ಹುದ್ದೆಗಳಿಗೆ ಹಾಗೂ 149 ಅಂಗನವಾಡಿ ಸಹಾಯಕಿಯರು ಹುದ್ದೆಗಳು ಸೇರಿದಂತೆ ಒಟ್ಟು 215 ಖಾಲಿ ಸ್ಥಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆರಿಗೆ ದ್ವಿತೀಯ ಪಿಯುಸಿ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ 19 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಅಭ್ಯರ್ಥಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು https://karnemakaone.kar.nic.
ಖಾಲಿ ಹುದ್ದೆಗಳ ವಿವರ: ಭರಮಸಾಗರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 08 ಮುಖ್ಯ ಅಂಗನವಾಡಿ ಕಾರ್ಯಕರ್ತೆ ಹಾಗೂ 21 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 29 ಖಾಲಿ ಹುದ್ದೆಗಳಿವೆ. ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 3 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 12 ಅಂಗನವಾಡಿ ಸಹಾಯಕಿ ಸೇರಿದಂತೆ 15 ಹುದ್ದೆಗಳು ಖಾಲಿ ಇವೆ. ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 16 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 30 ಅಂಗನವಾಡಿ ಸಹಾಯಕಿ ಸೇರಿದಂತೆ 46 ಹುದ್ದೆಗಳು ಖಾಲಿ ಇದೆ.
ಹಿರಿಯೂರು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 4 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಸೇರಿದಂತೆ 40 ಹುದ್ದೆಗಳು ಖಾಲಿ ಇದೆ. ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 09 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 14 ಅಂಗನವಾಡಿ ಸಹಾಯಕಿಯರ ಸೇರಿದಂತೆ 24 ಹುದ್ದೆಗಳು ಖಾಲಿ ಇವೆ. ಹೊಸದುರ್ಗ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 18 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರ ಸೇರಿದಂತೆ 42 ಹುದ್ದೆಗಳು ಮತ್ತು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 05 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 14 ಅಂಗನವಾಡಿ ಸಹಾಯಕಿಯರ ಸೇರಿದಂತೆ 19 ಹುದ್ದೆಗಳು ಖಾಲಿ ಇವೆ.
ಕ್ಲಿಕ್ ಮಾಡಿ ಓದಿ: Suspended; ಕರ್ತವ್ಯ ಲೋಪ | ಭರಮಸಾಗರ ಪಿಡಿಓ ಶ್ರೀದೇವಿ ಅಮಾನತು
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.