CHITRAUDRGA NEWS | 24 MARCH 2026
ಚಿತ್ರದುರ್ಗ: ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 2026-27ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು 5ನೇ ತರಗತಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಚಿತ್ರದುರ್ಗಕ್ಕೆ ಗುಡ್ ನ್ಯೂಸ್ | ಕೇಂದ್ರೀಯ ವಿದ್ಯಾಲಯ ಪ್ರಾರಂಭ | ತರಗತಿ ಪ್ರವೇಶಕ್ಕೆ ನೊಂದಣಿಗೆ ಏ.2 ಕೊನೆ ದಿನ
ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಪರಿಶಿಷ್ಟ ಜಾತಿಗೆ ಸೇರಿದ್ದು, ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. 5ನೇ ತರಗತಿಯಲ್ಲಿ ಶೇ.60 ರಷ್ಟು ಅಂಕ ಪಡೆದಿರಬೇಕು. ಬಾಲಕಿಯರಿಗೆ ಶೇ.50ರಷ್ಟು ಸ್ಥಾನಗಳು ಮೀಸಲು ಇರುತ್ತವೆ. ಪ್ರತಿಷ್ಠತ ಶಾಲೆಗಳ ಆಯ್ಕೆ ಒಂದು ಕುಟುಂಬದಲ್ಲಿ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗುವುದು. ವಿದ್ಯಾರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.
ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಕಛೇರಿಯಲ್ಲಿ ಆನ್‌ಲೈನ್ ನೊಂದಣಿ ಪ್ರಕ್ರಿಯೆ ನಡೆಯಲಿದೆ. ಪೋಷಕರು ನಿಗದಿತ ಅರ್ಜಿಯೊಂದಿಗೆ 04 ಪಾರ್ಸ್ಪೋರ್ಟ್ ಸೈಜ್ ಭಾವಚಿತ್ರ, 5ನೇ ತರಗತಿಯ ಅಂಕಪಟ್ಟಿ(ಪ್ರೋಗ್ರೆಸ್ ಕಾರ್ಡ್) ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಇತ್ಯಾದಿ ಅಗತ್ಯ ನಕಲು ದಾಖಲೆಗಳನ್ನು ಒದಗಿಸಬೇಕು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 23 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
ಏಪ್ರಿಲ್ 15 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಮೇ.4 ಕಡೆಯ ದಿನವಾಗಿದೆ. ನಂತರ ಬಂದಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
