CHITRADURGA NEWS | 12 MAY 2026
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 93 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಸಾಧ್ಯ | ಎಸ್.ಸಂದೀಪ್
ಚಿತ್ರದುರ್ಗ 15 ಹುದ್ದೆ, ಭರಮಸಾಗರ 14 ಹುದ್ದೆ, ಚಳ್ಳಕೆರೆ 14 ಹುದ್ದೆ, ಹಿರಿಯೂರು 13 ಹುದ್ದೆ, ಹೊಳಲ್ಕೆರೆ 13 ಹುದ್ದೆ, ಹೊಸದುರ್ಗ 14 ಹುದ್ದೆ ಮತ್ತು ಮೊಳಕಾಲ್ಮುರುನಲ್ಲಿ10 ಹುದ್ದೆಗಳು ಖಾಲಿಯಿವೆ. ಕಾರ್ಯಕರ್ತೆಯರಿಗೆ ಮಾಸಿಕ ರೂ. 5,500 ಹಾಗೂ ಸಹಾಯಕಿಯರಿಗೆ ಮಾಸಿಕ ರೂ. 3,000 ಗೌರವಧನ ನೀಡಲಾಗುವುದು.
ಅಭ್ಯರ್ಥಿಗಳು 18 ರಿಂದ 35 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು.ಕಾರ್ಯಕರ್ತೆ ಹುದ್ದೆ ದ್ವಿತೀಯ ಪಿಯುಸಿ ತೇರ್ಗಡೆಯಾಗಿರಬೇಕು. ಒಂದು ವೇಳೆ ಪಿಯುಸಿ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದರೆ 10ನೇ ತರಗತಿ ಪಾಸಾದವರನ್ನು ಪರಿಗಣಿಸಲಾಗುವುದು. ಸಹಾಯಕಿ ಹುದ್ದೆಗೆ ಕನಿಷ್ಠ 10ನೇ ತರಗತಿ ಪಾಸಾಗಿರಬೇಕು.
ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ 7ನೇ ತರಗತಿ ಪಾಸಾದವರನ್ನು ಪರಿಗಣಿಸಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಜೂನ್ 08ರ ಒಳಗೆ ಸಲ್ಲಿಸಬಹುದು.
ಇದನ್ನೂ ಓದಿ: ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಪಂ ಸಿಇಓ ಖಡಕ್ ಸೂಚನೆ
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಯಾ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
