
CHITRADURGA NEWS | 06 MARCH 2026
ಚಿತ್ರದುರ್ಗ: ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರಸಕ್ತ ವರ್ಷದ 8ನೇ ತರಗತಿ ಪ್ರವೇಶಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಅನೈರ್ಮಲ್ಯಕರ ವೃತ್ತಿಯಲ್ಲಿ ತೊಡಗಿರುವ ಪೋಷಕರ ಗಂಡು ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಕರ್ನಾಟಕ ಮಾಧ್ಯಮ ಅಕಾಡೆಮಿ | ಪತ್ರಕರ್ತೆಯರಿಗೆ ವಿಶೇಷ ತರಬೇತಿ | ಅರ್ಜಿ ಅಹ್ವಾನ

ಏ.15 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಶಾಲೆಯಲ್ಲಿ ಆಯ್ಕೆಯ ಪ್ರವೇಶ ಪರೀಕ್ಷೆ ನಡೆಯಲಿದೆ. ಆಸಕ್ತರು ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿಯಿಂದ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಮಾ.25 ರೊಳಗಾಗಿ ಶ್ರೀ ರಾಮಕೃಷ್ಣ ವಿದ್ಯಾಶಾಲೆ, ಯಾದವಗಿರಿ ಮೈಸೂರು-570020 ಇಲ್ಲಿಗೆ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
