CHITRADURGA NEWS | 02 December 2025
ಚಿತ್ರದುರ್ಗ: ಕರ್ನಾಟಕ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ತರಬೇತಿ ಸಂಸ್ಥೆಯಲ್ಲಿ ಜನವರಿ ಒಂದು 2026 ರಿಂದ ಪ್ರಾರಂಭವಾಗುವ ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ರೆಗ್ಯುಲರ್ ಮತ್ತು ದೂರ ಶಿಕ್ಷಣದ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಕ್ಯಾಂಪಸ್ ಸಂದರ್ಶನದಲ್ಲಿ SJMIT 18 ವಿದ್ಯಾರ್ಥಿಗಳ ಆಯ್ಕೆ
ತರಬೇತಿ ಪಡೆಯಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಡಿಸೆಂಬರ್ 15 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಪಿಯುಸಿ ಉತ್ತೀರ್ಣರಾಗಿರಬೇಕು. ಪಿಯುಸಿ ಮೇಲ್ಪಟ್ಟ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು.
ಈ ತರಬೇತಿಯು ಸಹಕಾರ ಕ್ಷೇತ್ರದ ನೇಮಕಾತಿ ಪರೀಕ್ಷೆಗಳಿಗೆ ಅನುಕೂಲಕರ ಹಾಗೂ ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೂ ಮಾಹೆಯಾನ ಶಿಷ್ಯವೇತನ ನೀಡಲಾಗುವುದು.
ಇದನ್ನೂ ಓದಿ: ಇಂದಿನ ಅಡಿಕೆ ಬೆಲೆ | ಡಿಸೆಂಬರ್ 2 | ಯಾವ ಅಡಿಕೆ ರೇಟ್ ಎಷ್ಟು ?
ಅರ್ಜಿಯನ್ನು ಪಡೆಯುವ ವಿಳಾಸ: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋರ್ಟಿ ಮ್ಯಾನೇಜ್ಮೆಂಟ್ ನಂಬರ್ 1/2, ಎರಡನೇ ಮಹಡಿ ಮೂರನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು -18 ಹೆಚ್ಚಿನ ಮಾಹಿತಿಗಾಗಿ 9449007661 ಹಾಗೂ 08035541407 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
