
CHITRADURGA NEWS | 07 JULY 2026
ಚಿತ್ರದುರ್ಗ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ST/SC ಉದ್ಯಮಿಗಳಿಗಾಗಿ ಉಚಿತ ವೆಂಡರ್ ಡೆವೆಲೋಪ್ಮೆಂಟ್ ಕಾರ್ಯಾಗಾರ
2026-27ನೇ ಸಾಲಿನ ಸಾಮಾನ್ಯ ಪದವಿ ಮಟ್ಟದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ (STATE HOSTEL PORTAL) ಅಧಿಕೃತ ವೆಬ್ಸೈಟ್ ಆದ https://shp.karnataka.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಇದನ್ನೂ ಓದಿ: ಹರಳಯ್ಯ ಸ್ವಾಮೀಜಿ ಮೇಲೆ ಹಲ್ಲೆ ನಡೆಸಿದವರ ಬಂಧನ
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ತಮ್ಮ ಹತ್ತಿರದ ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿ, ಸಂಬಂಧಪಟ್ಟ ವಿದ್ಯಾರ್ಥಿನಿಲಯಗಳು ಅಥವಾ ಅಲ್ಪಸಂಖ್ಯಾತರ ಜಿಲ್ಲಾ/ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

