ಮುಖ್ಯ ಸುದ್ದಿ
ಪ್ರಥಮ ಪಿಯುಸಿ ವಿಜ್ಞಾನ ವಿಭಾಗ ಪ್ರವೇಶಕ್ಕೆ ಅರ್ಜಿ ಆಹ್ವಾನ


CHITRADURGA NEWS | 07 MAY
ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಮತ್ತು ಬೊಮ್ಮನಕಟ್ಟೆ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜುಗಳಿಗೆ 2025-26ನೇ ಸಾಲಿಗೆ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ (ಪಿ.ಸಿ.ಎಂ.ಬಿ/ಪಿ.ಸಿ.ಎಂಸಿ.ಎಸ್) ಪ್ರವೇಶಕ್ಕೆ ಆಯಾ ಕಾಲೇಜುವಾರು ಪ್ರತ್ಯೇಕ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
Also Read: ನಾಕೀಕೆರೆ ಶ್ರೀ ಕಲ್ಲೇಶ್ವರ ಸ್ವಾಮಿ ಅಗ್ನಿಕುಂಡ ಮಹೋತ್ಸವ | ವಿಜೃಂಭಣೆಯ ಅಡ್ಡಪಲ್ಲಕ್ಕಿ ಉತ್ಸವ
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿರುವ ಶಾಲೆಗಳಲ್ಲಿ ಓದಿರುವ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಮೇ 05 ರಿಂದ ಅರ್ಜಿ ಸ್ವೀಕಾರ ಆರಂಭವಾಗಿದ್ದು, ಮೇ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸಂಬಂಧಪಟ್ಟ ವಸತಿ ಕಾಲೇಜುಗಳಲ್ಲಿ ಅರ್ಜಿ ಪಡೆದು ಸಲ್ಲಿಸಬಹುದು.
ಅರ್ಜಿಯ ಜೊತೆಗೆ ಎಸ್‍ಎಸ್‍ಎಲ್‍ಸಿ ಪ್ರವೇಶ ಪತ್ರದ ಜೆರಾಕ್ಸ್, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಜೆರಾಕ್ಸ್, ಇತ್ತೀಚಿನ ಎರಡು ಭಾವಚಿತ್ರ, ವಿಶೇಷ ವರ್ಗಕ್ಕೆ ಸೇರಿದ ಪ್ರಮಾಣ ಪತ್ರ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ (ಪ್ರಾಂಶುಪಾಲರ ಸಹಿಯೊಂದಿಗೆ) ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ತಿಳಿಸಿದ್ದಾರೆ.
Also Read: ಮಾರುಕಟ್ಟೆ ಧಾರಣೆ | ಇಂದಿನ ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
