CHITRADURGA NEWS | 16 MAY 2026
ಚಿತ್ರದುರ್ಗ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ 2026-27ನೇ ಸಾಲಿನ ಹೊಸ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಮೇ.18 ರಿಂದ SSLC ಪರೀಕ್ಷೆ-2 | ಜಿಲ್ಲೆಯಲ್ಲಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ADC ಸೂಚನೆ
ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಲು ಜೂನ್ 30 ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಜುಲೈ 31 ಕೊನೆಯ ದಿನಾಂಕವಾಗಿದೆ. ಆಸಕ್ತ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‍ಸೈಟ್ www.sw.kar.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 2.50 ಲಕ್ಷ ರೂಪಾಯಿಗಳ ಮಿತಿಯೊಳಗಿರಬೇಕು. ಪ್ರವೇಶಾತಿ ಬಯಸುವವರು ತಮ್ಮ SATsನಂಬರ್ ಅಥವಾ ಕಾಲೇಜು ದಾಖಲಾತಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್, ಆಧಾರ್ ಕಾರ್ಡ್, ಹಿಂದಿನ ತರಗತಿಯ ಅಂಕಪಟ್ಟಿ ಹಾಗೂ ದೂರದ ಪ್ರಮಾಣ ಪತ್ರದಂತಹ ಅಗತ್ಯ ದಾಖಲೆಗಳನ್ನು ಹೊಂದಿರಬೇಕು. ಮುಖ್ಯವಾಗಿ ಬ್ಯಾಂಕ್ ಖಾತೆಯು NPCI ಮೂಲಕ ಆಧಾರ್ ಜೋಡಣೆಯಾಗಿರುವುದು ಕಡ್ಡಾಯವಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಕಚೇರಿಯಲ್ಲಿ ಡಿಕೆಶಿ ಬರ್ತ್ ಡೇ | ಕೇಕ್ ಕತ್ತರಿಸಿ ಸಂಭ್ರಮಿಸಿದ ಪಪ್ಪಿ
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಹತ್ತಿರದ ವಿದ್ಯಾರ್ಥಿನಿಲಯದ ವಾರ್ಡನ್‍ರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
