BVA ಪದವಿ ಪ್ರವೇಶಾತಿಗೆ ಅರ್ಜಿ ಅಹ್ವಾನ

ಅರ್ಜಿ ಅಹ್ವಾನ

CHITRADURGA NEWS | 25 APRIL 2025

ಚಿತ್ರದುರ್ಗ: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜುಯಲ್ ಆಟ್ರ್ಸ್ (ಬಿ.ವಿ.ಎ) (ನಾಲ್ಕು ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ. ಪದ್ದತಿ) ದೃಶ್ಯಕಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ ಪದವಿ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Also Read: ಚಿತ್ರದುರ್ಗ RTO ಕಚೇರಿಯಲ್ಲಿ ಸಾರಿಗೆ ಅದಾಲತ್ | ಅಹವಾಲುಗಳು ಇದ್ದರೆ ಸಲ್ಲಿಸಿ..

ಈ ಪದವಿಯಲ್ಲಿ 3ನೇ ಸೆಮಿಸ್ಟರ್‍ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಷ್ಟುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಚಿತ್ರ ಪತ್ರಿಕೋದ್ಯಮ ವಿಭಾಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ htts://uucms.karnataka.gov.in ಅಥವಾ https://www.cavamysore karnataka.gov.in ಅಂತರ್ಜಾಲದ ಮೂಲಕವೇ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು.

Also Read: ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಹುಂಡಿ ಎಣಿಕೆ | ಪರೀಕ್ಷೆ ಪಾಸು ಮಾಡಿಸು, ಕೊಟ್ಟ ಸಾಲು ವಾಪಾಸು ಕೊಡಿಸು | ಚೀಟಿ ಬರೆದು ಹಾಕಿದ ಭಕ್ತರು

ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಾಲಯದ ಸಹಾಯವಾಣಿಗೆ ಕಛೇರಿ ಸಮಯದಲ್ಲಿ 0821-2438931 ಯನ್ನು ಸಂಪರ್ಕಿಸಬಹುದು ಎಂದು ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version