CHITRADURGA NEWS | 07 AUGUST 2026
ಚಿತ್ರದುರ್ಗ: ಕೃಷಿ ಯಾಂತ್ರೀಕರಣವನ್ನು ಉತ್ತೇಜಿಸುವ ಉದ್ದೇಶದಿಂದ 2026–27ನೇ ಸಾಲಿನ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ ವರ್ಗದ ರೈತರು, ಸಂಘ-ಸಂಸ್ಥೆಗಳು ಮತ್ತು ರೈತ ಉತ್ಪಾದಕ ಕಂಪನಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಮಂಜುನಾಥ್ ಬಿ. ತಿಳಿಸಿದ್ದಾರೆ.
ಇದನ್ನೂ ಓದಿ: ಚಳ್ಳಕೆರೆಯಲ್ಲಿ ತೀವ್ರ ಬರದ ಬರೆ | ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ
ಚಿತ್ರದುರ್ಗ ಜಿಲ್ಲೆಯಲ್ಲಿ ವೈಯಕ್ತಿಕ ಫಲಾನುಭವಿಗಳಡಿ ಸಾಮಾನ್ಯ ವರ್ಗ ಮತ್ತು ಪರಿಶಿಷ್ಟ ಜಾತಿ ವರ್ಗಕ್ಕೆ ತಲಾ ಒಂದು ಘಟಕ ಸೇರಿದಂತೆ ಒಟ್ಟು ಎರಡು ಘಟಕಗಳ ಸ್ಥಾಪನೆಗೆ ಅವಕಾಶ ಕಲ್ಪಿಸಲಾಗಿದೆ. ಯೋಜನೆಯಡಿ ಖರೀದಿಸುವ ಯಂತ್ರೋಪಕರಣಗಳನ್ನು ರೈತರು ತಮ್ಮ ಕೃಷಿ ಕಾರ್ಯಗಳಿಗೆ ಬಳಸಿಕೊಂಡು, ಬಳಿಕ ಬಾಡಿಗೆ ಆಧಾರದಲ್ಲಿ ಇತರ ರೈತರಿಗೆ ನೀಡುವ ಮೂಲಕ ಹೆಚ್ಚುವರಿ ಆದಾಯ ಗಳಿಸಬಹುದಾಗಿದೆ.
ಬೆಳೆಯ ವಿಧ ಹಾಗೂ ಕಟಾವು ಅವಧಿಯನ್ನು ಆಧರಿಸಿ ಕಾರಿಡರ್ ಮಾದರಿಯಲ್ಲಿ ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲಾಗುವುದು. ನಿಗದಿತ ಮಾನದಂಡಗಳಂತೆ ಗರಿಷ್ಠ ಸಹಾಯಧನವನ್ನು ಕ್ರೆಡಿಟ್ ಲಿಂಕ್ಡ್ ಬ್ಯಾಕ್ ಎಂಡೆಡ್ ಸಬ್ಸಿಡಿ ಮೂಲಕ ಬಿಡುಗಡೆ ಮಾಡಲಾಗುತ್ತದೆ.
ಜೊತೆಗೆ ಆಯ್ಕೆಯಾದ ಫಲಾನುಭವಿಗಳು ಕೃಷಿ ಮೂಲಭೂತ ಸೌಕರ್ಯ ನಿಧಿ (AIF) ಯೋಜನೆಯಡಿ ಸಾಲದ ನೆರವು ಹಾಗೂ ಶೇ.3ರಷ್ಟು ಬಡ್ಡಿದರ ರಿಯಾಯಿತಿಯ ಸೌಲಭ್ಯವನ್ನೂ ಪಡೆಯಬಹುದಾಗಿದೆ.
ಆಸಕ್ತರು ಆಗಸ್ಟ್ 5ರಿಂದ 20ರವರೆಗೆ ಸಂಬಂಧಿತ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

