CHITRADURGA NEWS | 12 FEBRUARY 2026
ಚಿತ್ರದುರ್ಗ: ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ 2025-26 ನೇ ಸಾಲಿನಲ್ಲಿ ಕೃಷಿಯಲ್ಲಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಹಾಗೂ ಜಿಲ್ಲೆಯಲ್ಲಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲ ಪಡಿಸಲು ವೈಯಕ್ತಿಕ ಫಲಾನುಭವಿಗಳಿಗೆ ಸಾಮಾನ್ಯ ವರ್ಗದ ರೈತರಿಂದ, ಸಂಘ ಸಂಸ್ಥೆಗಳಿಂದ ಹಾಗೂ ರೈತ ಉತ್ಪಾದಕ ಕಂಪನಿಗಳಿಂದ ಕಂಬೈನ್ಡ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಡಾ.ಮಂಜುನಾಥ ಬಿ ತಿಳಿಸಿದ್ದಾರೆ.
ಇದನ್ನೂ ಓದಿ: ಭದ್ರೆಗಾಗಿ ರೈತರ ಪಾದಯಾತ್ರೆ | ನೀರಾವರಿ ಹೋರಾಟ ಸಮಿತಿಯ ಬೆಂಬಲ | ಪಿ.ಕೋದಂಡರಾಮಯ್ಯ ಘೋಷಣೆ
ಚಿತ್ರದುರ್ಗ ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ ಸಾಮಾನ್ಯ ಘಟಕದಡಿ ವೈಯಕ್ತಿಕ ಫಲಾನುಭವಿಗಳಿಗೆ ಎರಡು ಘಟಕ ಸ್ಥಾಪನೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯಂತ್ರಗಳನ್ನು ರೈತರು ತಮ್ಮ ಬೆಳೆ ಒಕ್ಕಣೆ ಮಾಡಿಕೊಂಡು ನಂತರ ಬಾಡಿಗೆಗೆ ನೀಡುವ ಮೂಲಕ ಹೆಚ್ಚುವರಿ ಆದಾಯ ಪಡೆಯಬಹುದಾಗಿದೆ.
ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಬೆಳೆಯ ವಿಧ ಮತ್ತು ಕಟಾವು ಅವಧಿಯ ಆಧಾರದ ಮೇಲೆ ಕಾರಿಡರ್ ಮಾದರಿಯಲ್ಲಿ ಸ್ಥಾಪಿಸುವುದು. ಕೃಷಿ ಯಂತ್ರೋಪಕರಣವಾರು ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು.
ಈ ಸಹಾಯಧನವನ್ನು ಕ್ರೆಡಿಟ್ ಲಿಂಕ್ಡ್ ಬ್ಯಾಕ್ ಎಂಡೆಡ್ ಸಬ್ಸಿಡಿ ಮೂಲಕ ಬಿಡುಗಡೆ ಮಾಡಲಾಗುವುದು. ಆಯ್ಕೆಯಾದ ಫಲಾನುಭವಿಗಳು ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಸಾಲದ ನೆರವನ್ನು ಹಾಗೂ ಶೇ.3 ರಷ್ಟು ಬಡ್ಡಿ ರಿಯಾಯಿತಿ ಸೌಲಭ್ಯವನ್ನು ಪಡೆಯಲು ಸಹ ಅವಕಾಶವಿದೆ.
ಇದನ್ನೂ ಓದಿ: ಪ್ರಯಾಣಿಕರಿಗೆ ಗುಡ್ ನ್ಯೂಸ್ | ರೈಲ್ ಒನ್ ಆಪ್ ಬಿಡುಗಡೆ | ಇದರ ವಿಶೇಷತೆ ಏನು… ಇಲ್ಲಿದೆ ಮಾಹಿತಿ
ಅರ್ಜಿಗಳನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ 25 ಫೆಬ್ರವರಿ 2026 ರೊಳಗಾಗಿ ಸಲ್ಲಿಸುವುದು. ಸಹಾಯಕ ಕೃಷಿ ನಿರ್ದೇಶಕರು ಸ್ವೀಕೃತವಾಗುವ ಎಲ್ಲ ಅರ್ಜಿಗಳನ್ನು ಮೇಲ್ಕಂಡ ಎಲ್ಲ ಅಂಶಗಳನ್ವಯ ಪರಿಶೀಲಿಸಿ ಸಂಬಂಧಿಸಿದ ಉಪ ಕೃಷಿ ನಿರ್ದೇಶಕರ ಮುಖಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
