CHITRADURGA NEWS | 03 JULY 2026
ಚಿತ್ರದುರ್ಗ: ಜಿಲ್ಲೆಯ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳ ಶುಲ್ಕ ಮರುಪಾವತಿಗಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (SSP) ಮೂಲಕ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಡಯಟ್ : ನಿವೃತ್ತ ಪ್ರಾಚಾರ್ಯ ಎಂ.ನಾಸಿರುದ್ದೀನ್ ಗೆ ಬೀಳ್ಕೊಡುಗೆ
2026-27ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಪದವಿ ಪೂರ್ವ, ಪದವಿ, ಸ್ನಾತಕೋತ್ತರ, ವೃತ್ತಿಪರ ಕೋರ್ಸ್‌ಗಳು ಹಾಗೂ ಎಂ.ಫಿಲ್ ಮತ್ತು ಪಿಹೆಚ್.ಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು.
ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‌ನ ಅಧಿಕೃತ ಲಿಂಕ್ https://ssp.postmatric.
ಇದನ್ನೂ ಓದಿ: 2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ. ಚಂದ್ರಪ್ಪ ಭೂಮಿಪೂಜೆ
ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ವಿದ್ಯಾರ್ಥಿಗಳು ತಮ್ಮ ಹತ್ತಿರದ ಜಿಲ್ಲಾ ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
