
CHITRADURGA NEWS | 27 NOVEMBER 2025
ಚಿತ್ರದುರ್ಗ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಮೂಲಕ ಮಾಡುತ್ತಿರುವ ವಿವಿಧ ಕಾರ್ಯಕ್ರಮ, ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ನವೆಂಬರ್ 26 | ಯಾವ ಅಡಿಕೆಗೆ ಎಷ್ಟು ರೇಟ್
ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ಚಿತ್ರದುರ್ಗ ಜಿಲ್ಲಾ ನಿಗಮದ 2025-26ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಅನುಮೋದಿತ ಕಾರ್ಯಕ್ರಮಗಳಾದ ಅರಿವು ವಿಧ್ಯಾಭ್ಯಾಸ ಸಾಲ ಯೋಜನೆ, ವಿದೇಶಿ ವಿಧ್ಯಾಭ್ಯಾಸ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಶ್ರಮಶಕ್ತಿ ಯೋಜನೆ, ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಗಂಗಾ ಕಲ್ಯಾಣ ಯೋಜನೆ, ವ್ಯಾಪಾರ ಉದ್ದಿಮೆ, ನೇರಸಾಲ ಯೋಜನೆ ಮತ್ತು ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಗಳಿಗೆ ಡಿಸೆಂಬರ್ 15 ರವರೆಗೆ ವಿಸ್ತರಿಸಿ ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಮುರುಘಾ ಶರಣರು ನಿರ್ದೋಷಿ | ಪೋಕ್ಸೋ ಪ್ರಕರಣದಿಂದ ಬಿಡುಗಡೆ
ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.kccdclonline.karanataka.gok.in , ಸಹಾಯವಾಣಿ ಸಂಖ್ಯೆ 6360753075 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
