
CHITRADURGA NEWS | 11 DECEMBER 2025
ಚಿತ್ರದುರ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ವಿಷಯ ವ್ಯಾಸಂಗ ಮಾಡಿರುವ ಪದವಿ, ಸ್ನಾತಕೋತ್ತರ ಪದವಿಧರರಿಗೆ ಚಿತ್ರದುರ್ಗ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ನುಲೇನೂರು ಶಂಕರಪ್ಪ ಪ್ರತಿಷ್ಠಾನದಿಂದ ಹಸಿರು ಪ್ರಶಸ್ತಿ ಪ್ರದಾನ

ಈ ತರಬೇತಿಗಾಗಿ ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು.
ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಚಿತ್ರದುರ್ಗ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಸ್ನಾತ್ತಕೋತ್ತರ ಅಂತಿಮ ವರ್ಷದ ಪದವಿಯ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ: ಮುರುಘಾ ಮಠಕ್ಕೆ ಶಕ್ತಿಯಾಗಿದ್ದವರು ಎಸ್.ನಿಜಲಿಂಗಪ್ಪ | ಡಾ.ಬಸವಕುಮಾರ ಸ್ವಾಮೀಜಿ
ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂ. (ಹದಿನೈದು ಸಾವಿರ ರೂಪಾಯಿಗಳು ಮಾತ್ರ) ಗಳ ಶಿಷ್ಯವೇತನ ನೀಡಲಾಗುವುದು. ಅವಧಿ ಈ ತರಬೇತಿಯು 2026ರ ಕ್ಯಾಲೆಂಡರ್ ಅವಧಿಯ ಜನವರಿ-2026ರ ಮಾಹೆಯಿಂದ ಪ್ರಾರಂಭಗೊಂಡು ಡಿಸೆಂಬರ್-2026ಕ್ಕೆ ಕೊನೆಗೊಳ್ಳಲಿದೆ.
ಈ ತರಬೇತಿಯು 12 ತಿಂಗಳ ಅಪ್ರೆಂಟಿಸ್ ತರಬೇತಿಯಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿಯ ಅವಧಿಯಲ್ಲಿ ಬೇರೆ ಉದ್ಯೋಗ ಮಾಡುವಂತಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ.
ಆಸಕ್ತರು ಅರ್ಜಿಯನ್ನು 2025ರ ಡಿಸೆಂಬರ್ 26 ರೊಳಗಾಗಿ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿ ಗಳ ಕಚೇರಿ ಆವರಣ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ | ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆ ವಿದ್ಯಾರ್ಥಿಗೆ ಕಂಚಿನ ಪದಕ
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಿಂದ ಪಡೆಯಬಹುದು ಎಂದು ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
