CHITRADURGA NEWS | 04 SEPTEMBER 2026
ಚಿತ್ರದುರ್ಗ: ಹಿರಿಯೂರು ತಾಲೂಕಿನ ಉಡುವಳ್ಳಿಯಲ್ಲಿರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027–28ನೇ ಶೈಕ್ಷಣಿಕ ಸಾಲಿನ 9 ಮತ್ತು 11ನೇ ತರಗತಿಗಳ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.
ಇದನ್ನೂ ಓದಿ: ಹೊಸಯಳನಾಡು ಕರ್ನಾಟಕ ಪಬ್ಲಿಕ್ ಶಾಲೆ ರಾಜ್ಯಕ್ಕೆ ಮಾದರಿ | ಗಣ್ಯರ ಮೆಚ್ಚುಗೆ
9ನೇ ತರಗತಿ ಪ್ರವೇಶ: ಚಿತ್ರದುರ್ಗ ಜಿಲ್ಲೆಯ ಖಾಯಂ ನಿವಾಸಿಯಾಗಿರುವ ಹಾಗೂ 2026-27ನೇ ಸಾಲಿನಲ್ಲಿ ಜಿಲ್ಲೆಯ ಸರ್ಕಾರಿ ಅಥವಾ ಮಾನ್ಯತೆ ಪಡೆದ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು 01.05.2012 ರಿಂದ 31.07.2014 ರ ನಡುವೆ ಜನಿಸಿರಬೇಕು. ಹಿಂದಿ, ಇಂಗ್ಲಿμï, ಗಣಿತ ಮತ್ತು ವಿಜ್ಞಾನ ವಿಷಯಗಳ ಒಎಂಆರ್ ಆಧಾರಿತ ವಸ್ತುನಿಷ್ಟ ಪರೀಕ್ಷೆ ಇರಲಿದೆ. ಆಸಕ್ತರು cbseitms.nic.in/2026/nvsix_9 ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
11ನೇ ತರಗತಿ ಪ್ರವೇಶ: ಜಿಲ್ಲೆಯ ಖಾಯಂ ನಿವಾಸಿಯಾಗಿರುವ ಮತ್ತು 2026-27ರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರು. ಅಭ್ಯರ್ಥಿಗಳು 01.06.2010 ರಿಂದ 31.07.2012 ರ ನಡುವೆ ಜನಿಸಿರಬೇಕು. ಮಾನಸಿಕ ಸಾಮಥ್ರ್ಯ, ಇಂಗ್ಲಿಷ್, ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ವಿಷಯಗಳ ಮೇಲೆ ಪರೀಕ್ಷೆ ನಡೆಯಲಿದೆ.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಆಸಕ್ತರು cbseitms.nic.in/2026/nvsxi_11 ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರಶ್ನೆ ಪತ್ರಿಕೆಯು ಹಿಂದಿ ಮತ್ತು ಇಂಗ್ಲಿಷ್ ದ್ವಿಭಾಷೆಯಲ್ಲಿದ್ದು, ಹೆಚ್ಚಿನ ಮಾಹಿತಿಗಾಗಿ ನವೋದಯ ವಿದ್ಯಾಲಯ ಸಮಿತಿಯ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು ಎಂದು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

