CHITRADURGA NEWS | 01 June 2026
ಚಿತ್ರದುರ್ಗ: ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ 2026-27ನ ಸಾಲಿಗೆ ಕೃಷೋನ್ನತಿ-ಕೃಷಿ ವಿಸ್ತರಣೆ (ಆತ್ಮ) ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಕೃಷಿ ಇಲಾಖೆಯಲ್ಲಿ ಹೊಸದಾಗಿ 6 ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳಿಗೆ ನೇರ ಗುತ್ತಿಗೆ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
ಮೊಳಕಾಲೂರು ತಾಲ್ಲೂಕು ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಒಂದರಂತೆ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬಬೂರು ಪಾರಂಗೆ ಒಂದು ಹುದ್ದೆ. ಒಟ್ಟು 6 “ಸಹಾಯಕ ತಾಂತ್ರಿಕ ವ್ಯವಸ್ಥಾಪಕರ” ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕೃಷಿ/ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಕೃಷಿ/ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಠ 1 ವರ್ಷದ ಕ್ಷೇತ್ರ ಮಟ್ಟದ ಅನುಭವ ಹೊಂದಿರಬೇಕು. ಅರ್ಜಿದಾರರು 10.06.2026ಕ್ಕೆ 45 ವರ್ಷದೊಳಗಿರಬೇಕು. ವೇತನ ಮಾಹೆಯಾನ ರೂ. 25,000/- ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಆತ್ಮ ವಿಭಾಗ, ಜಂಟಿ ಕೃಷಿ ನಿರ್ದೇಶಕರ ಕಛೇರಿ, ಚಿತ್ರದುರ್ಗ ಇಲ್ಲಿ ಅರ್ಜಿಯನ್ನು ಪಡೆದು, ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಪೂರ್ಣ ಮಾಹಿತಿಯೊಂದಿಗೆ ದಿನಾಂಕ:30.06.2026 ಸಂಜೆ 5ರ ಒಳಗಾಗಿ ಮುದ್ರಾಂ / ನೊಂದಣೆ ಅಂಚೆ ಮೂಲಕ ಜಂಟಿ ಕೃಷಿ ನಿರ್ದೇಶಕರು, ಆತ್ಮ ವಿಭಾಗ ಚಿತ್ರದುರ್ಗ ಇವರಿಗೆ ಅರ್ಜಿ ಸಲ್ಲಿಸಲು ಸೂಚಿಸಿದ್ದು, ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಅರ್ಜಿಯೊಂದಿಗೆ ವಿದ್ಯಾರ್ಹತೆ ಸಂಬಂಧಿಸಿದಂತೆ ಎಲ್ಲಾ ವರ್ಷದ ಅಂಕಪಟ್ಟಿಗಳು, ಅನುಭವ ಪ್ರಮಾಣ ಪತ್ರಗಳು, ಕಂಪ್ಯೂಟರ್ ಜ್ಞಾನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಲಗತ್ತಿಸುವುದು ಕಾಯವಾಗಿರುತ್ತದೆ ಮತ್ತು ಎಲ್ಲಾ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿಗಳನ್ನು ಸಲ್ಲಿಸಬೇಕು.
ಇದನ್ನೂ ಓದಿ: ಟಿ.ರಘುಮೂರ್ತಿಗೆ ಬರ್ತ್ ಡೇ ಗಿಫ್ಟ್ ಕೊಡ್ತಾರಾ ಡಿಕೆಶಿ ..?!
ಹೆಚ್ಚಿನ ಮಾಹಿತಿಗಾಗಿ ಆತ್ಮ ವಿಭಾಗ, ಜಂಟಿ ಕೃಷಿ ನಿರ್ದೇಶಕರ ಕಛೇರಿ, ಚಿತ್ರದುರ್ಗ ಇಲ್ಲಿ ಸಂಪರ್ಕಿಸಲು ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

