CHITRADURGA NEWS | 19 JUNE 2026
ಚಿತ್ರದುರ್ಗ: ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎಸ್ಎಸ್ಪಿ ಫೋರ್ಟಲ್) 2026–27ನೇ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಮುಂಗಾರು ಹಂಗಾಮು ಬೆಳೆ ವಿಮೆ | ರೈತರ ನೋಂದಣಿಗೆ ಅವಕಾಶ
2026ರ ಜೂನ್ 10 ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅರ್ಹ ವಿಕಲಚೇತನ ವಿದ್ಯಾರ್ಥಿಗಳು ತಾವು ಓದುತ್ತಿರುವ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖಾಂತರ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ವೆಬ್ಸೈಟ್ಗಳಾದ https://ssp.postmatric.
ಹೆಚ್ಚಿನ ಮಾಹಿತಿ ಹಾಗೂ ನೆರವಿಗಾಗಿ ಚಿತ್ರದುರ್ಗ-9880821934), ಚಳ್ಳಕೆರೆ-9611266930, ಹಿರಿಯೂರು-9902888901, 9902898901, ಹೊಳಲ್ಕೆರೆ-9740030227, ಹೊಸದುರ್ಗ -9741829990 ಹಾಗೂ ಮೊಳಕಾಲ್ಮೂರು -9742725576 ತಾಲ್ಲೂಕಿನ ಫುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ: ಜೂನ್ 28 ರಿಂದ ಪಲ್ಸ್ ಪೋಲಿಯೋ ಅಭಿಯಾನ | 1.27 ಲಕ್ಷ ಮಕ್ಕಳಿಗೆ ಲಸಿಕೆ ಗುರಿ
ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಒನಕೆ ಓಬವ್ವ ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ಇಲ್ಲಿಗೆ ಭೇಟಿ ನೀಡಬಹುದು. ಕಚೇರಿ ದೂರವಾಣಿ ಸಂಖ್ಯೆ: 01894–235284 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

