ಮುಖ್ಯ ಸುದ್ದಿ
BSC, GNM ನರ್ಸಿಂಗ್ ಕೋರ್ಸ್ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಅಹ್ವಾನ

CHITRADURGA NEWS | 24 SEPTEMBER 2024
ಚಿತ್ರದುರ್ಗ: 2024-25ನೇ ಸಾಲಿಗೆ ಬಿಎಸ್ಸಿ(BSC) ನರ್ಸಿಂಗ್ ಮತ್ತು ಜಿಎನ್‌ಎಂ(GNM) ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಮತ್ತು ಪಾರ್ಸಿ ಸಮುದಾಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: Zilla Panchayat election; ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ | ಬಿ.ವೈ.ವಿಜಯೇಂದ್ರ ಕರೆ
ನವೆಂಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಸೇವಾ ಸಿಂಧು ವೆಬ್‌ಸೈಟ್ https://sevasindhu.karnataka.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕೋರ್ಸುನ ಅವಧಿ-ಪೂರ್ಣಾವಧಿ. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಒಟ್ಟು ಆದಾಯ 2.50ಲಕ್ಷ ಮೀರಿರಬಾರದು.
ಕ್ಲಿಕ್ ಮಾಡಿ ಓದಿ: Selection of 87 villages; ಮೂಲ ಸೌಲಭ್ಯ ಅಭಿವೃದ್ಧಿಗೆ ಜಿಲ್ಲೆಯ 87 ಗ್ರಾಮಗಳ ಆಯ್ಕೆ
ವಿದ್ಯಾರ್ಥಿಗಳನ್ನು ಅನುದಾನದ ಲಭ್ಯತೆಯನುಸಾರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಈ ಯೋಜನೆಯಡಿ ಉತ್ತೇಜನ ಮೊತ್ತವನ್ನು ಪಡೆಯಲು ಪ್ರತಿ ಶೈಕ್ಷಣಿಕ ವರ್ಷದಲ್ಲಿ ಹೊಸ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
