CHITRADURGA NEWS | 18 AUGUST 2026
ಚಿತ್ರದುರ್ಗ: 2026-27ನೇ ಸಾಲಿನ “ಕೃಷಿ ಪ್ರಶಸ್ತಿಗೆ” ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಇದನ್ನೂ ಓದಿ: ಗೃಹಲಕ್ಷ್ಮಿ | 32ನೇ ಕಂತಿನ ಹಣ ಬಿಡುಗಡೆ
K.Kisan Portal ರಡಿ RSK Login ಅಥವಾ Citizen Login ಮೂಲಕ ಅರ್ಜಿಯನ್ನು ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರೀಕ ಸೇವಾ ಕೇಂದ್ರ, ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ FID (FRUITS ID) ಸಂಖ್ಯೆಯನ್ನು ಬಳಸಿಕೊಂಡು ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕೃಷಿ ಪ್ರಶಸ್ತಿಗೆ ಪುರುಷರ ಮತ್ತು ಮಹಿಳೆಯರ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಆನ್‍ಲೈನ್ ಮೂಲಕ ನೋಂದಣಿ ಮಾಡಬಹುದಾಗಿದೆ. ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರದಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಅರ್ಜಿದಾರರಿಂದ ಅಗತ್ಯ ದಾಖಲಾತಿಗಳೊಂದಿಗೆ ಭೌತಿಕವಾಗಿಯೂ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಇದನ್ನೂ ಓದಿ: ಬೇವಿನ ಎಲೆಯ ನೀರನ್ನು ಕುಡಿಯುವುದರಿಂದ ಏನಾಗುತ್ತದೆ ಗೊತ್ತಾ?
ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸುವುದು. ಈ ಕಾರ್ಯದಲ್ಲಿ ಹೆಚ್ಚಿನ ಪ್ರಗತಿಪರ ರೈತರು ಭಾಗವಹಿಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಾದ ಬಿ.ಮಂಜುನಾಥ ಕೋರಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

