CHITRADURGA NEWS | 12 NOVEMBER 2025
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿಯಲ್ಲಿನ 2 ಕಾನೂನು ನೆರವು ಉಪ ಪ್ರಧಾನ ಕಾನೂನು ಅಭಿರಕ್ಷರು (Deputy Legal Aid Defense Counsel) ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ಅಪರಾಧಿಕ ಕಾನೂನುಗಳ ಬಗ್ಗೆ ಅತ್ಯುತ್ತಮ ಜ್ಞಾನ, ಸಂವಹನ ಕೌಶಲ್ಯ,20 ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸಿದ ಹಾಗೂ 7 ವರ್ಷ ಸೇವಾ ಅನುಭವ ಹೊಂದಿರಬೇಕು.
ಇದನ್ನೂ ಓದಿ: ಬಂಜಾರ ಸಮುದಾಯಕ್ಕೆ MLC, ಸಚಿವ ಸ್ಥಾನಕ್ಕೆ ಸೇವಾಲಾಲ್ ಸ್ವಾಮೀಜಿ ಒತ್ತಾಯ
ಇದರೊಂದಿಗೆ ಕೆಲಸಕ್ಕೆ ಅಗತ್ಯ ಇರುವ ಐಟಿ ಜ್ಞಾನ ಬಲ್ಲವರಾಗಿರಬೇಕು. ಆಯ್ಕೆಯಾದವರಿಗೆ ಮಾಸಿಕ ರೂ.45,000 ಗೌರವಧನ ನೀಡಲಾಗುವುದು.
ಆಸಕ್ತರು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವ ಅಕ್ಷರದಲ್ಲಿ ತಮ್ಮ ವೈಯಕ್ತಿಕ ವಿವರ ಭರ್ತಿ ಮಾಡಿ, ಇದೇ ನವೆಂಬರ್ 20 ಸಂಜೆ 6 ಗಂಟೆಯ ಒಳಗೆ ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
