
CHITRADURGA NEWS | 29 JULY 2025
ಚಿತ್ರದುರ್ಗ: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ಚಿತ್ರಕಲೆ ಮತ್ತು ಶಿಲ್ಪಕಲೆ ವಿಭಾಗಗಳಲ್ಲಿ ಎರಡು ವರ್ಷಗಳ ಸ್ನಾತಕೋತ್ತರ ದೃಶ್ಯಕಲಾ ಪದವಿ (ಮಾಸ್ಟರ್ ಆಫ್ ವಿಜ್ಯುಯಲ್ ಆಟ್ರ್ಸ್) ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ನಗರಸಭೆ ಉಪಾಧ್ಯರ ಚುನಾವಣೆ | ಶಕೀಲಾಬಾನು ಅವಿರೋಧ ಆಯ್ಕೆ

ದೃಶ್ಯಕಲಾ ಸ್ನಾತಕ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು 2025-26ನೇ ಶೈಕ್ಷಣಿಕ ಸಾಲಿನ ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ“UUCMS PORTAL” ಮೂಲಕ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆಗಸ್ಟ್ 07 ಕೊನೆಯ ದಿನವಾಗಿದೆ. ಆಗಸ್ಟ್ 11 ರ ಬೆಳೆಗ್ಗೆ ಅರ್ಹತಾ ಪರೀಕ್ಷೆ ಹಾಗೂ ಮಧ್ಯಾಹ್ನ 02 ಗಂಟೆಗೆ ವೈಯಕ್ತಿಕ ಸಂದರ್ಶನ ಇರಲಿದೆ. ಆಸಕ್ತ ಅಭ್ಯರ್ಥಿಗಳು ಅಂತರ್ಜಾಲ ವಿಳಾಸ http://www.mysore.nic.in ಮತ್ತು http://www.cavamysore.karnataka.gov.in ರ ಮೂಲಕ ಮಾಹಿತಿಯನ್ನು ಪಡೆಯಬಹುದು.
ಇದನ್ನೂ ಓದಿ: ಮದಗದ ಕೆರೆ ಭರ್ತಿ | ವಿವಿ ಸಾಗರದ ಕಡೆಗೆ ಹರಿವು | ಭದ್ರೆಗಿಂತ ಮೊದಲೇ ವೇದಾವತಿ ಒಡಲಿಗೆ ನೀರು
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2438931 ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
